ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದೆ: ಸಿಎಂ ಬೊಮ್ಮಾಯಿ

Date:

  • ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್
  • ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ

ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯ ತಮ್ಮ ಆದರ್ಶ ನಗರದ ನಿವಾಸ ಬಳಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್, ಮತ ಬ್ಯಾಂಕ್ ಎಂದು ತಿಳಿದುಕೊಂಡು ಏನು ಬೇಕಾದರೂ ಮಾತಾಡಿದರೆ ನಡೆಯುತ್ತದೆ ಎಂಬ ಅಮಲಿನಲ್ಲಿ ಇದ್ದಾರೆ” ಎಂದರು.

“ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಿರೋದು ಎಲ್ಲಕಿಂತ ಹೆಚ್ಚು ನೋವಾಗಿದೆ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರು 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ ಹಂತದಲ್ಲಿ ಗೌರವಯುತವಾಗಿ ನಡೆದುಕೊಂಡರೆ ಶೋಭೆ ತರುತ್ತದೆ ಎಂದರು. ಇಲ್ಲದಿದ್ದರೆ ಜನ ಇಷ್ಟು ವರ್ಷ ಇವರು ಏನು ಮಾಡಿದರು ಎಂದು ಕೇಳುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರನ್ನು ಯಾವಾಗ ಯಾವಾಗ ಬೈದ್ರು ಅವಾಗ ಮೋದಿ ಮತ ಜಾಸ್ತಿ ಆಗಿವೆ. ಮುಖ್ಯಮಂತ್ರಿ ಆದಾಗ ಬೈದರು, ಮೋದಿ ಮೂರು ಬಾರಿ ಮುಖ್ಯಮಂತ್ರಿ ಆದರು. ಪ್ರಧಾನಮಂತ್ರಿಯಾದರು. ಇದೀಗ ವಿಷ ಸರ್ಪ ಎಂಬ ಹೇಳಿಕೆ ಮೂಲಕ ಜನರ ಭಾವನೆ ಕೆರಳಿಸುತ್ತಿದ್ದಾರೆ. ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ನನ್ನನ್ನು ಗುರಿಯಾಗಿಸುವುದು ಸಹಜ” ಎಂದು ಹೇಳಿದರು.

“ಕಾಂಗ್ರೆಸ್ ಮತ ಬ್ಯಾಂಕ್ ಛಿದ್ರವಾಗಿದೆ. ಅವರ ಮತ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು. ಅವರ ಕಾಲ ಕೆಳಗೆ ಇದ್ದ ಮತಗಳು ಸರಿದು ಹೋಗಿದೆ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ” ಎಂದರು.

“ಎಸ್ಸಿ, ಎಸ್ಟಿ, ಒಬಿಸಿ ಮತಗಳು ಅವರ ಕೈ ತಪ್ಪಿ ಅವರ ಅಣೆಕಟ್ಟು ಒಡೆದಿದೆ. ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡುತ್ತಿದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ 8 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರದ ಆರೋಪ ಇದೆ. ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತನಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...