ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳ ಬಲವಿರುದ್ದ ಸರ್ಕಾರ ರಚಿಸಲು ಯಾವುದೇ ಪಕ್ಷಕ್ಕೆ 113 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಸದ್ಯ ಕಾಂಗ್ರೆಸ್ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 84 ಮತ್ತು ಜೆಡಿಎಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ಗೆ ಅಧಿಕಾರವೆಂದು ಹೇಳಿವೆ. ಅದರಂತೆಯೇ ಕಾಂಗ್ರೆಸ್ ಸದ್ಯ ಅಗತ್ಯ ಬಹುಮತದ ಸಂಖ್ಯೆಗಳಲ್ಲಿ ಮುನ್ನಡೆ ಸಾಧಿಸಿದೆ.




