ಮೋದಿ ಗೋಳಾಟ: ಚುನಾವಣೆ ಹೊಸ್ತಿಲಿನಲ್ಲಿ ‘ಕ್ರೈ ಪಿಎಂ, ಪೇ ಸಿಎಂ’ ಅಭಿಯಾನ

Date:

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಇತ್ತೀಚೆಗೆ ಕಾಂಗ್ರೆಸ್‌ ‘ಪೇ ಸಿಎಂ’ ಅಭಿಯಾನ ನಡೆಸಿತ್ತು. ಇದೀಗ, ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಹೋದ ಬಳಿಕ ಮತ್ತೊಂದು ಅಭಿಯಾನವನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ ‘ಕ್ರೈಪಿಎಂ-ಪೇಸಿಎಂ’ (ಅಳುಮುಂಜಿ ಪ್ರಧಾನಿ, ಕಮಿಷನ್ ಮುಖ್ಯಮಂತ್ರಿ) ಅಭಿಯಾನ ಟ್ರೆಂಡಿಂಗ್‌ನಲ್ಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಪ್ರಧಾನಿ ಮೋದಿ, ‘ತಮ್ಮನ್ನು ವಿರೋಧಿಗಳು ಬೈಯುತ್ತಿದ್ದಾರೆ. ಕಾಂಗ್ರೆಸ್‌ನವರು ಇದೂವರೆಗೂ 91 ಬಾರಿ ನನಗೆ ಬೈದಿದ್ದಾರೆ’ ಎಂದು ಹೇಳಿಕೊಂಡು ಭಾಷಣದ ವೇಳೆ ಗೋಳಾಡಿದ್ದರು.

ಅವರು ಗೋಳಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, “ಜನರ ದುಖಃವನ್ನು ಕೇಳಬೇಕಾದ ಪ್ರಧಾನಿ, ಜನರ ಮುಂದೆ ಬಂದು ತಮ್ಮ ದುಖಃವನ್ನು ಹೇಳಿಕೊಳ್ಳುತ್ತಿದ್ದಾರೆ. ಗಾಬರಿಯಾಗಬೇಡಿ ಮೋದಿಜೀ, ಧೈರ್ಯವಾಗಿರಿ… ಇದು ಸಾರ್ವಜನಿಕ ಜೀವನ” ಎಂದು ಹೇಳಿದ್ದರು. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌, ‘CryPMPayCM‘ ಅಭಿಯಾನ ಪ್ರಾರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

CryPMPayCM ಎಂಬ ಹ್ಯಾಶ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದು, ಹಲವಾರು ಕಾಂಗ್ರೆಸ್ ನಾಯಕರು ಇದನ್ನು ಬಳಸುತ್ತಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಪ್ರಧಾನಿಯವರ ಭಾಷಣಗಳು ನನ್ನ ಫೇಸ್‌ಬುಕ್ ಫೀಡ್‌ನಲ್ಲಿ ಕಾಣಿಸಿಕೊಳ್ಳುತ್ತಿವೆ. ಅವುಗಳಲ್ಲಿನ ದೂರುಗಳಲ್ಲಿ ಅಥವಾ ವಿಷಯಗಳಾಗಲ್ಲಿ ಗಣನೀಯ ಅಂಶಗಳಿಲ್ಲ. ಇದು ತಮ್ಮ ಬಗ್ಗೆ ಹೇಳಿಕೊಂಡು ಗೋಳಾಡುವ ಸಮಯವೇ? #CryPMPayCM” ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಟ್ವೀಟ್ ಮಾಡಿದೆ.

“ಮೋದಿ ಈಗ ಯಾಕೆ ಬಂದಿದ್ದಾರೆ? ಅವರು ಚುನಾವಣೆಯ ಸಮಯದಲ್ಲಿ ರಾಜ್ಯಕ್ಕೆ ಬರುತ್ತಾರೆ. ಬಂದು ಅಳುತ್ತಾರೆ, ಬೊಬ್ಬೆ ಹೊಡೆಯುತ್ತಾರೆ ಮತ್ತು ಚುನಾವಣೆ ಮುಗಿದ ಬಳಿಕ ಕಣ್ಮರೆಯಾಗುತ್ತಾರೆ. ಅವರು ಇಷ್ಟು ದಿನ ಎಲ್ಲಿದ್ದರು? ಕರ್ನಾಟಕದ ಜನರು #CryPMPayCM ಅನ್ನು ಹೀಗೆ ತಿರಸ್ಕರಿಸುತ್ತಿದ್ದಾರೆ” ಎಂದು ಅರ್ಜುನ್ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಆದರೆ, ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಅಳಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ನವಲಗುಂದ ಕಾಂಗ್ರೆಸ್ ಅಭ್ಯರ್ಥಿ ಎನ್‌.ಎಚ್‌ ಕೋನರೆಡ್ಡಿ ಪರ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ, “ನಾನು ಇಂದಿರಾ ಗಾಂಧಿಯಿಂದ ಹಿಡಿದು ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ವರೆಗೆ ಹಲವಾರು ಪ್ರಧಾನಿಗಳನ್ನು ನೋಡಿದ್ದೇನೆ. ಸಾರ್ವಜನಿಕರ ಕುಂದುಕೊರತೆಗಳನ್ನು ನಿರ್ಲಕ್ಷಿಸಿ ತಮ್ಮ ಸಮಸ್ಯೆಗಳನ್ನು ಮಾತ್ರ ಹಂಚಿಕೊಳ್ಳುವ ಏಕೈಕ ಪ್ರಧಾನಿ ಮೋದಿಯೊಬ್ಬರೇ,” ಎಂದು ವ್ಯಂಗ್ಯವಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...