ದಕ್ಷಿಣ ಕನ್ನಡ | ಚುನಾವಣಾ ಸೇವೆ; ಹಣ ಬಿಡುಗಡೆಗೆ ವಿಳಂಬ ಮಾಡದಂತೆ ಟ್ಯಾಕ್ಸಿ ಚಾಲಕರ ಒತ್ತಾಯ

Date:

ಕಳೆದ ಚುನಾವಣೆ ಮತ್ತು ಸರ್ಕಾರದ ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಒದಗಿಸಿದ್ದ ಟ್ಯಾಕ್ಸಿ ಸೇವೆಗಳಿಗೆ ಹಣ ಬಿಡುಗಡೆ ಮಾಡುವಂತೆ ಕೇಳಲು ಅತ್ತಿಂದತ್ತ ಅಲೆದಾಡುವಂತೆ ಮಾಡಿದ್ದಾರೆ ಎಂದು ಹಲವು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರು ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಟ್ಯಾಕ್ಸಿ ಚಾಲಕ ಮತ್ತು ಮ್ಯಾಕ್ಸಿಕ್ಯಾಬ್‌ ಸಂಘದ ಅಧ್ಯಕ್ಷ ದಿನೇಶ್ ಕುಂಪಲ ಅವರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜ್ಞಾಪಕ ಪತ್ರ ಸಲ್ಲಿಸಿದ್ದು, “ನಮ್ಮ ಕೆಲವು ಸದಸ್ಯರು ಹಿಂದಿನ ಚುನಾವಣೆಯ ನಂತರ ಸುಮಾರು ಒಂದು ವರ್ಷದ ನಂತರ ಹಣವನ್ನು ಪಡೆದರು. ಇದಲ್ಲದೆ, ಹಲವು ವರ್ಗದ ವಾಹನಗಳಿಗೆ ಸಮರ್ಪಕ ದರವನ್ನು ವೈಜ್ಞಾನಿಕವಾಗಿ ನಿಗದಿಪಡಿಸಿಲ್ಲ. ಅದನ್ನು ಸರ್ಕಾರ ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟ್ಯಾಕ್ಸಿಗೆ ₹2,700 ಮತ್ತು ಮಿನಿ ಬಸ್‌ಗಳಿಗೆ ದಿನಕ್ಕೆ ₹3,900 ನಿಗದಿಪಡಿಸಿದ್ದಾರೆ. ಇದು ಇಂಧನಕ್ಕೆ ಸಾಕಾಗುವುದಿಲ್ಲ. ಇದಲ್ಲದೆ, ಪಾವತಿ ಬಿಡುಗಡೆಯ ವಿಳಂಬದಿಂದ ಟ್ಯಾಕ್ಸಿ ಚಾಲಕರ ಮೇಲೂ ಪರಿಣಾಮ ಬೀರುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಿನಿ ಬಸ್‌ಗಳಿಗೆ ದಿನಕ್ಕೆ ₹6,000, ಇನ್ನೋವಾದಂತಹ ವಾಹನಗಳಿಗೆ ₹4,000, ಇತರೆ ಕಾರುಗಳಿಗೆ ₹3,500 ಮಂಜೂರು ಮಾಡುವಂತೆ ಸಂಘವು ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ದರ ನಿಗದಿ

ಚುನಾವಣೆಗೆ ಸಂಬಂಧಿಸಿದಂತೆ ಹಲವು ರೀತಿಯ ಸೇವೆಗಳಿಗೆ ವಾಹನಗಳ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಮಂಗಳೂರಿನ ಆರ್‌ಟಿಒಗೆ ವಹಿಸಲಾಗಿದೆ. ಆದರೆ, ಚುನಾವಣಾ ಸೇವೆಗೆ ಬಾಡಿಗೆ ಪಡೆದ ಖಾಸಗಿ ವಾಹನಗಳ ಬಿಲ್‌ಗಳನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಜಿಲ್ಲಾಡಳಿತವು ಬಿಡುಗಡೆ ಮಾಡುತ್ತದೆ” ಎಂದು ಆರ್‌ಟಿಒ ಜಾನ್ ಬಿ ಮಿಸ್ಕ್ವಿತ್ ಹೇಳಿದರು.

“ಚುನಾವಣೆಗೆ ಕನಿಷ್ಠ 10 ದಿನಗಳ ಮೊದಲು ಚುನಾವಣಾ ಕೆಲಸಗಳಿಗೆ ಅಗತ್ಯವಿರುವ ಖಾಸಗಿ ವಾಹನಗಳು ಸೇರಿದಂತೆ ಒಟ್ಟು ವಾಹನಗಳ ಸಂಖ್ಯೆಯ ಬಗ್ಗೆ ನಾವು ಸೂಕ್ತ ಮಾಹಿತಿ ಪಡೆಯುತ್ತೇವೆ. ನಾವು ಈಗಾಗಲೇ ಕೆಲವು ವಾಹನಗಳ ವ್ಯವಸ್ಥೆ ಮಾಡಿದ್ದೇವೆ. ಅವಶ್ಯಕತೆಯ ಆಧಾರದ ಮೇಲೆ ಹೆಚ್ಚಿನ ವ್ಯವಸ್ಥೆ ಒದಗಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಹಿಂಗಾರು ಹಂಗಾಮಿನ ನೀರು ಸ್ಥಗಿತ

“ಚುನಾವಣಾ ಕಾರ್ಯಕ್ಕೆ ಅಗತ್ಯವಿರುವ ವಾಹನಗಳ ಸಂಖ್ಯೆ ಮತ್ತು ವರ್ಗಗಳನ್ನು ಜಿಲ್ಲಾಡಳಿತ ನಿರ್ಧರಿಸುತ್ತದೆ. ನಾವು ವಾಹನಗಳ ವ್ಯವಸ್ಥೆ ಮಾಡುತ್ತೇವೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಖಾಸಗಿ ವಾಹನಗಳಿಗೆ ನೀಡಬೇಕಾದ ಪಾವತಿಯನ್ನು ಜಿಲ್ಲಾಡಳಿತದ ಮೂಲಕ ಇತ್ಯರ್ಥಪಡಿಸಲಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...