ನ. 30ರಂದು ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

Date:

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2024 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. 2024 ನೇ ಸಾಲಿನ ಪ್ರಶಸ್ತಿಯನ್ನು ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಜ್ಞ ಕೆ.ಆರ್. ಗಂಗಾಧರ, ಗ್ರಾಮೀಣ ಪತ್ರಿಕೋದ್ಯಮದಲ್ಲಿ ಕ್ರಾಂತಿ ಮಾಡಿರುವ ಡಾ. ಯು.ಪಿ. ಶಿವಾನಂದ ಹಾಗೂ ಅರೆಭಾಷಿಕರ ಸಂಘಟಕ ದಂಬೆಕೋಡಿ ಆನಂದ ಇವರುಗಳಿಗೆ ನೀಡಲಾಗುವುದು. ಪ್ರಶಸ್ತಿಯು ತಲಾ 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸದಾನಂದ ಮಾವಜಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಇವರು ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಸದಸ್ಯರಾದ ಎ.ಎಸ್. ಪೊನ್ನಣ್ಣ ಇವರು ಅರೆಭಾಷೆ ನಾಟಕ ‘ಅಪ್ಪ’ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ. ಗರುಡಾಚಾರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಬಿಳಿಮಲೆ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪ ಗೌಡ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಟಿ.ಎಚ್.ಎಂ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ.ಎಂ. ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ (ರಿ) ಮಡಿಕೇರಿ ಇದರ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿಥಿಗಳಾಗಿ ಕೊಡಗು ಗೌಡ ಸಮಾಜ (ರಿ) ಬೆಂಗಳೂರಿನ ಅಧ್ಯಕ್ಷರಾದ ಕೇಕಡ ಎ. ನಾಣಯ್ಯ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಅಧ್ಯಕ್ಷರಾದ ಶ್ರೀ ಪಾಣತ್ತಲೆ ಪಳಂಗಪ್ಪ, ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರಿನ ಅಧ್ಯಕ್ಷರಾದ ಪಿ. ಓಂಪ್ರಕಾಶ್, ಕೊಡಗು ಗೌಡ ಸಮಾಜಗಳ ಒಕ್ಕೂಟ (ರಿ) ಮಡಿಕೇರಿ ಇದರ ಉಪಾಧ್ಯಕ್ಷರಾದ ತೇನನ ರಾಜೇಶ್ ಇವರುಗಳು ಭಾಗವಹಿಸಲಿದ್ದಾರೆ ಎಂದು ಮಾವಜಿ ತಿಳಿಸಿದ್ದಾರೆ.

ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಅರೆಭಾಷೆ ಗೌಡರ ಐನ್‌ಮನೆ ಸಾಕ್ಷ್ಯಚಿತ್ರ ಬಿಡುಗಡೆ ಹಾಗೂ ಪ್ರದರ್ಶನ ಇರುತ್ತದೆ. ಅಂತೆಯೇ ಅರೆಭಾಷೆ ನಾಟಕ ‘ಅಪ್ಪ’ದ ಪ್ರದರ್ಶನವಿರುತ್ತದೆ. ಸಿದ್ಧವೇಷ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸದಾನಂದ ಮಾವಜಿ ಹೇಳಿದ್ದಾರೆ.

05b4125da454a168537d9df817254267
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...