ಮಂಗಳೂರು | ರಥೋತ್ಸವದ ವೇಳೆ ಮುರಿದು ಬಿದ್ದ ಬಪ್ಪನಾಡು ದೇವಸ್ಥಾನದ ರಥ ! ವಿಡಿಯೋ ವೈರಲ್

Date:

ಮೂಲ್ಕಿಯ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ.
ಈ ಸಂದರ್ಭದಲ್ಲಿ ಹಲವಾರು ಮಂದಿ ಅರ್ಚಕರು ರಥದಲ್ಲಿಯೇ ಕುಳಿತಿದ್ದರು. ಕೆಳಗಡೆ ಸಾವಿರಾರು ಭಕ್ತಾಧಿಗಳು ರಥ ಎಳೆಯುವುದರಲ್ಲಿ ತಲ್ಲೀನರಾಗಿದ್ದರು. ಏಕಾ ಏಕಿ ರಥವನ್ನು ನಿಗ್ರಹಿಸುವ ದಂಡ ತುಂಡಾದ ಪರಿಣಾಮ ರಥದ ಮೇಲ್ಬಾಗ ಸಂಪೂರ್ಣ ಧರೆಗೆ ಉರುಳಿದೆ. ಓರ್ವ ಅರ್ಚಕರಿಗೆ ಸಣ್ಣಪುಟ್ಟ ತರಚಿದ ಗಾಯವಾಗಿದ್ದು, ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ.

ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ಮುಂದುವರಿಸಲಾಯಿತು. ಯಾವುದೇ ವಿಘ್ನವಿಲ್ಲದೇ ಜಾತ್ರೋತ್ಸವ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50)...

ಮಂಗಳೂರು | ತಾಯಿಯನ್ನೇ ಹತ್ಯೆಗೈದಿದ್ದಾನೆಂದು ಆರೋಪ; ಆರೋಪಿ ಪುತ್ರನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿರ್ಬಂಧದ ಹಿಂದಿನ ರಹಸ್ಯವೇನು?

ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು...

ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು...