ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

Date:

eedina
ಈ ದಿನ ಡೆಸ್ಕ್‌
Website |  + posts

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮ್ಮಿನಡ್ಕ ಎಂಬಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗಿದೆ. ಅವುಗಳನ್ನು ಬಿಜೆಪಿ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ಅವರು ದೂರು ನೀಡಿದ್ದರು. ದೂರು ನೀಡಿದ್ದರಿಂದ ಶಾಸಕ ಆಕ್ರೋಶಗೊಂಡಿದ್ದು, ಅರಣ್ಯಾಧಿಕಾರಿ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಮನೆಯನ್ನು ಅರಣ್ಯಾಧಿಕಾರಿಗಳು ತೆರವು ಮಾಡಿದ್ದರು. ಈ ವಿಚಾರ ಜಟಾಪಟಿಗೆ ತಿರುಗಿದ್ದರಿಂದ ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮೂರು ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನೇಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಮಾಣವಾಗುತ್ತಿದ್ದ ಮನೆಯನ್ನು ಅಡಿಪಾಯ ಸಹಿತ ಅರಣ್ಯಾಧಿಕಾರಿಗಳು ತೆರವುಗೊಳಿಸಿದ ಮಾಹಿತಿ ತಿಳಿದು, ಸ್ಥಳಕ್ಕೆ ಧಾವಿಸಿದ ಶಾಸಕ ಹರೀಶ್ ಪೂಂಜಾ, ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಸೂಚಿಸಿದ್ದಾರೆ. ಹೀಗಾಗಿ, ಸೋಮವಾರ ಕೂಡ ತೆರವು ಕಾರ್ಯಾಚರಣೆಗೆ ತೆರಳಿದ ಅರಣ್ಯಾಧಿಕಾರಿಗಳ ವಿರುದ್ಧ ಬಿಜೆಪಿಗರು ಸಿಡಿಮಿಡಿಗೊಂಡಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಗಿರಥಿ ಜಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಎಂಎಲ್​ಸಿ ಪ್ರತಾಪ್ ಸಿಂಹ ನಾಯಕ್ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...