ನಿರೀಕ್ಷಿಯ ಪ್ರತಿಷ್ಠೆಯ ಚುನಾವಣಾ ಕ್ಷೇತ್ರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4 ನೇ ದಿನಾಂಕದಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂತಿಮವಾಗಿ ನೂತನ ಶಾಸಕರು ಯಾರು ಎಂದು ನಿರ್ಧಾರವಾಗಲಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾನ ಮತ್ತು ಫಲಿತಾಂಶದ ದಿನ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.
ದೆಹಲಿಯ ಚುನಾವಣಾ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಚುನಾವಣಾ ಆಯುಕ್ತ ಜ್ನಾನೇಶ್ ಕುಮಾರ್ “ಅಸ್ಸಾಂ ಸೇರಿದಂತೆ ಇತರ ರಾಜ್ಯಗಳ ಚುನಾವಣೆಗಳ ಜೊತೆಗೆ ಕರ್ನಾಟಕ ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳ” ದಿನಾಂಕಗಳನ್ನು ಘೋಷಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಾವಣಗೆರೆಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಾಳೆ ಮಾರ್ಚ್ 16ರಿಂದ ನೀತಿಸಂಹಿತೆ ಜಾರಿಗೆ ಬರಲಿದೆ. ಮಾರ್ಚ್ 23ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 9ಕ್ಕೆ ಮತದಾನ ನಡೆಯಲಿದ್ದು ಮೇ 4 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ನಿರ್ಧಾರವಾಗಲಿದೆ.
ಚುನಾವಣಾ ಆಯೋಗ ದಿಡೀರ್ ಆಗಿ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕಗಳನ್ನು ಘೋಷಣೆ ಮಾಡಿರುವುದು ರಾಜಕೀಯ ಪಕ್ಷಗಳು ಮತ್ತು ಆಕಾಂಕ್ಷಿಗಳಲ್ಲಿ ದಿಗ್ಭ್ರಮೆ ಹುಟ್ಟಿಸಿದೆ. ಕಾಂಗ್ರೆಸ್ ಬಿಜೆಪಿ ಸೇರಿದಂತೆ ಪಕ್ಷಗಳಲ್ಲಿ ಇನ್ನು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಕಾಂಗ್ರೆಸ್ ಬಿಜೆಪಿ ಪಕ್ಷಗಳಲ್ಲಿ ಟಿಕೆಟ್ ಗಾಗಿ ಹಣಾಹಣಿ ಏರ್ಪಟ್ಟಿದೆ.
ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ದಂಡಿದ್ದು ಮುಖ್ಯವಾಗಿ ಶಾಮನೂರು ಮನೆತನದ ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್, ಎಂಎಲ್ಸಿ ಅಬ್ದುಲ್ ಜಬ್ಬಾರ್ ಸಾಬ್, ಸೈಯದ್ ಸೈಫುಲ್ಲಾ, ಖಾಲಿದ್ ಮಹಮ್ಮದ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಮುಖ್ಯವಾಗಿ ಕ್ಷೇತ್ರದಲ್ಲಿ ಬಹು ಸಂಖ್ಯಾತ, 85ಸಾವಿರ ಮತದಾರರಿರುವ ಮುಸ್ಲಿಮರು ಸಾಮಾಜಿಕ ನ್ಯಾಯದಡಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದಾರೆ.
ಬಿಜೆಪಿಯಲ್ಲೂ ಕೂಡ ಯಶವಂತರಾವ್ ಜಾದವ್, ಅಜಯ್ ಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ ಸೇರಿದಂತೆ ಹಲವು ಹೊಸ ಮುಖಗಳು ಕೂಡ ಕಾಣಿಸಿಕೊಳ್ಳುತ್ತಿದ್ದು, ಟಿಕೆಟ್ ಯಾರಿಗೆ ಸಿಗುವುದು ಎನ್ನುವುದು ಪ್ರಶ್ನಾರ್ಥಕವಾಗಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಡುಗೆ ಅನಿಲ ದರ ಇಳಿಕೆ ಹಾಗೂ ವಿಶ್ವ ಶಾಂತಿಗಾಗಿ ಯುದ್ಧ ನಿಲ್ಲಿಸಲು ಸಿಪಿಐ ಪ್ರತಿಭಟನೆ
ಅಂತಿಮವಾಗಿ ಚುನಾವಣಾ ದಿನಾಂಕವನ್ನು ದಿಡೀರಾಗಿ ಹತ್ತಿರದಲ್ಲೇ ಘೋಷಿಸಿರುವುದು ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಆತಂಕ ಹುಟ್ಟಿಸಿದ್ದು, ಪಕ್ಷದ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎನ್ನುವ ನಿರೀಕ್ಷೆ ಹೆಚ್ಚಾಗಿದೆ.
.





