ಸುಳ್ಳು ಸುದ್ದಿ ಹರಡುವ ಚಾನೆಲ್‌ಗಳ ವಿರುದ್ಧ ಮಾನನಷ್ಟ ಮೊಕದ್ದಮೆ: ಡಿಕೆಶಿ ಎಚ್ಚರಿಕೆ

Date:

  • ಪಕ್ಷವೇ ನನ್ನ ದೇವರು. ನಾನು ಪಕ್ಷವನ್ನು ಕಟ್ಟಿ ಬೆಳಸಿದ್ದೇನೆ ಎಂದ ಡಿಕೆಶಿ
  • ತಾಯಿ ತನ್ನ ಮಗುವಿಗೆ ಎಲ್ಲವನ್ನೂ ನೀಡುತ್ತಾಳೆ ಎಂದ ಕೆಪಿಸಿಸಿ ಅಧ್ಯಕ್ಷರು

ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿರುವ ಟಿವಿ ವಾಹಿನಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಕೆಪಿಸಿಸಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಯಾವುದೇ ಚಾನೆಲ್ ವರದಿ ಮಾಡುತ್ತಿದ್ದರೆ, ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ . ಕೆಲವರು ನಾನು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನನ್ನ ತಾಯಿ. ನಾನು ಈ ಪಕ್ಷವನ್ನು ಕಟ್ಟಿದ್ದೇನೆ” ಎಂದು ಸುಳ್ಳು ಸುದ್ದಿ ಹರಡಿದ ಚಾನೆಲ್‌ ವಿರುದ್ಧ ಆಕ್ರೋಶ ಹೊರಹಾಕಿದರು.

“135 ಶಾಸಕರ ಜೊತೆಗೆ ಹೈಕಮಾಂಡ್ ಕೂಡ ನನ್ನ ಜೊತೆಗಿದೆ. ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷವೇ ನನ್ನ ದೇವರು. ನಾನು ಈ ಪಕ್ಷವನ್ನು ಕಟ್ಟಿ ಬೆಳಸಿದ್ದೇನೆ. ನಾನು ಅದರ ಭಾಗವಾಗಿದ್ದೇನೆ ಮತ್ತು ಇದರಲ್ಲಿ ನಾನು ಒಬ್ಬಂಟಿಯಾಗಿಲ್ಲ. ತಾಯಿ ತನ್ನ ಮಗುವಿಗೆ ಎಲ್ಲವನ್ನೂ ನೀಡುತ್ತಾಳೆ ”ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ಮತದಾರರು ಕಲಿಸಿದ ಪಾಠವನ್ನು ಕಾಂಗ್ರೆಸ್ ಮರೆಯದಿರಲಿ

ಪಕ್ಷದ ರಾಜ್ಯಾಧ್ಯಕ್ಷರಾಗಿ ಅವರ ನಿರೀಕ್ಷೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಹಿಂದೆ ಏನಾಯಿತು ಎಂಬುದರ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಬಹುಮತ ಗಳಿಸಿದ್ದೇವೆ, ಸರ್ಕಾರವನ್ನು ರಚಿಸುತ್ತೇವೆ. ನಾವು ಹಿಂದೆ ಸಮ್ಮಿಶ್ರ ಸರ್ಕಾರವನ್ನು ಕಳೆದುಕೊಂಡಿದ್ದೇವೆ ಎಂಬುದು ಮುಗಿದ ಅಧ್ಯಾಯ. ಸೋಲು-ಗೆಲುವಿಗೆ ಯಾರು ಹೊಣೆ ಎಂದು ಈಗ ಮಾತನಾಡುವುದರಿಂದ ಪ್ರಯೋಜನವಿಲ್ಲ. ಕಟ್ಟುಕತೆಗಳನ್ನು ಸೃಷ್ಟಿಸಬೇಡಿ. ಭವಿಷ್ಯದ ಬಗ್ಗೆ ಮಾತನಾಡೋಣ” ಎಂದರು.

ಮಂಗಳವಾರ ಸಂಜೆಯ ನಂತರ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸುವ ನಿರೀಕ್ಷೆಯಿರುವುದರಿಂದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಸಿಎಂ ರೇಸ್ ಕೊನೆಗೊಳ್ಳುವ ಸಾಧ್ಯತೆಯಿದೆ.

ಡಿ ಕೆ ಶಿವಕುಮಾರ್ ಅವರು ಸೋಮವಾರ ಅನಾರೋಗ್ಯದ ಹಿನ್ನೆಲೆ ದೆಹಲಿ ಪ್ರವಾಸ ರದ್ದುಗೊಳಿಸಿದ್ದರು. ಸಿದ್ದರಾಮಯ್ಯ ಅವರು ಮಾತ್ರ ದೆಹಲಿಗೆ ಪ್ರಯಾಣ ಬೆಳೆಸಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸಭೆಗಳನ್ನು ನಡೆಸಿ ಸಿಎಂ ಸ್ಥಾನಕ್ಕೆ ಹೆಸರು ಘೋಷಿಸಲಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆದ ಸಿಎಲ್‌ಪಿ ಸಭೆಯಲ್ಲಿದ್ದ ವೀಕ್ಷಕರ ತಂಡವು ದೆಹಲಿಯಲ್ಲಿ ಪಕ್ಷದ ವರಿಷ್ಠರಿಗೆ ತಮ್ಮ ವರದಿಯನ್ನು ಸಲ್ಲಿಸಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಕೇವಲ 66 ಸ್ಥಾನ ಗಳಿಸಿ ಹೀನಾಯ ಸೋಲು ಕಂಡಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...