ಧಾರವಾಡ | ಆಯುಷ್ ಕೋರ್ಸ್ ಶುಲ್ಕ ಹೆಚ್ಚಳ; ಎಐಡಿಎಸ್‌ಓ ಖಂಡನೆ

Date:

ಆಯುಷ್ ಕೋರ್ಸ್ ಶುಲ್ಕವನ್ನು ಏಕಾಏಕಿ  ಶೇ 25ರಷ್ಟು ಹೆಚ್ಚಿಸಿರುವ  ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್‌ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್) ಖಂಡಿಸಿದೆ. 

ಈ ಬಗ್ಗೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಮಹಾಂತೇಶ್ ಬೀಳೂರ್ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾದಿಂದಾ ಕಳೆದ ಐದು ವರ್ಷ ಗಳಿಂದ ಶುಲ್ಕಹೆಚ್ಚಳ. ಆದ್ದರಿಂದ ಈ ವರ್ಷ ಶುಲ್ಕ ಹೆಚ್ಚಿಸಬೇಕೆಂದು ಅನುದಾನಿತ ಮತ್ತು‌ ಅನುದಾನ ರಹಿತ ಖಾಸಗಿ ಆಯುಷ್ ವೈದ್ಯಕೀಯ ಮಹಾ ವಿದ್ಯಾಲಯಗಳು ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಈ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಅಡಿಯಲ್ಲಿ ಬರುವ ಕೋರ್ಸ್ ಶುಲ್ಕವನ್ನು ₹60,000ದಿಂದ ₹75,000ಕ್ಕೆ ಏರಿಸಲಾಗಿದೆ. ಈ ರೀತಿ ಒಂದೇ ಏಟಿಗೆ ಶೇ‌.25ರಷ್ಟು‌ ಶುಲ್ಕ ಹೆಚ್ಚಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಕನಸಿಗೆ‌ ತಣ್ಣೀರೆರಚಿರುವುದು ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು  ಎತ್ತಿ‌ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ನೆರವಾಗಬೇಕಾದ ಸರ್ಕಾರವು, ಖಾಸಗಿ ಲಾಭಿಗಳ ಒತ್ತಡಕ್ಕೆ ಮಣಿದು ಶುಲ್ಕ ವನ್ನು ಹೆಚ್ಚಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ವಾಗ್ದಾಳಿ ಮಾಡಿದರು.

ಈ ಹಿನ್ನೆಲೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಈ ಶುಲ್ಕ ಹೆಚ್ಚಳವನ್ನು ಈ ಕೂಡಲೇ ರಾಜ್ಯ ಸರ್ಕಾರವು ಹಿಂಪಡೆಯಬೇಕೆಂದು ಎಐಡಿಎಸ್‌ಓ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ ಭಾಷಣದಲ್ಲಿ ‘ಸಾರ್ವಭೌಮತ್ವ’ ಪದವನ್ನು ಸೋನಿಯಾ ಗಾಂಧಿ ಬಳಸಿಲ್ಲ; ಕಾಂಗ್ರೆಸ್‌ ಸ್ಪಷ್ಟನೆ

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ...

ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ....

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ | ಶೆಟ್ಟರ್ ಅಸ್ತ್ರಕ್ಕೆ ‘ಕಮಲ’ ಕಂಪನ

ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ (ಎಸ್.ಆರ್ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್)...

ಪ್ರಲ್ಹಾದ್ ಜೋಶಿ ಪ್ರತಿಷ್ಠೆ, ಶೆಟ್ಟರ್‌ ಬಂಡಾಯದ ನಡುವೆ ರಾಷ್ಟ್ರದ ಗಮನ ಸೆಳೆಯುತ್ತಿರುವ ಧಾರವಾಡ ಕ್ಷೇತ್ರ

ಧಾರವಾಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರ ಮೇಲೆ ಕಣ್ಣಿಟ್ಟಿರುವ...