ಧಾರವಾಡ | ಗ್ರಾಮೀಣ ಕೂಲಿಕಾರರಿಗೆ ಸ್ಪಂದಿಸದ ಗ್ರಾಪಂ ಅಧಿಕಾರಿಗಳು: ಸೂಕ್ತ ಕ್ರಮಕ್ಕೆ ಒತ್ತಾಯ

Date:

ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮತ್ತು ಗ್ರಾಮೀಣ ಕೂಲಿಕಾರರಿಗೆ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ವತಿಯಿಂದ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಈ ವೇಳೆ ಜಿಲ್ಲೆಯ ವಿವಿಧ ತಾಲೂಕು ಮತ್ತು ಹಳ್ಳಿಗಳ ಕೂಲಿ ಕಾರ್ಮಿಕರು ಮಾತನಾಡಿ, ಎಂ.ಆರ್.ಇ.ಜಿ.ಎ ಕ್ರಿಯಾ ಯೋಜನೆ ತಯಾರಿಸಲು ಜನರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಲು ಜನರ ಆವಾಲುಗಳನ್ನು ಸ್ವೀಕರಿಸಲು ತಪ್ಪದೇ ಗ್ರಾಮ ಸಭೆ ಮಾಡುವ ಕ್ರಿಯಾ ಯೋಜನೆ ತಯಾರಿಸುವಂತೆ ಮಾಡಬೇಕು. ಆದರೆ ಪ್ರಸ್ತುತ ಅನೇಕ ಹಳ್ಳಿಗಳಲ್ಲಿ ವಾರ್ಡ್ ಸಭೆ, ಗ್ರಾಮ ಸಭೆಗಳು ನಡೆಯುತ್ತಿಲ್ಲ.

ಕೆಲವೊಂದಿಷ್ಟು ಗ್ರಾಮಗಳಲ್ಲಿ ಶೌಚಾಲಯ ಬಿಲ್ಲುಗಳು ಆಗುವುದಿಲ್ಲ. ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಕಾರ್ಮಿಕರು ಹೋದಾಗ ಅವರಿಗೆ ಸರಿಯಾಗಿ ಸ್ಪಂದಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮನವಿಯನ್ನು ಮಾಡಿಕೊಂಡಿದ್ದೇವೆ. ಇನ್ನಾದರೂ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು. ಈ ಎಲ್ಲ ಸಮಸ್ಯೆಗಳನ್ನು 15 ದಿನದೊಳಗಾಗಿ ಬಗೆಹರಿಸದಿದ್ದರೆ ಎಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂದೆ ಗ್ರಾಮೀಣ ಕೂಲಿಕಾರರೆಲ್ಲ ಧರಣಿ‌ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...