ಚುನಾವಣೆ 2023 | ಕಲ್ಯಾಣ ಕರ್ನಾಟಕದಲ್ಲಿ ಎಸ್‌ಸಿ ‘ಬಲ ಸಮುದಾಯ’ಕ್ಕೆ ಒಂದೂ ಟಿಕೆಟ್ ನೀಡದ ಬಿಜೆಪಿ

Date:

ಖರ್ಗೆಯವರು ಪರಿಶಿಷ್ಟ ಜಾತಿಯ 'ಬಲ' ಸಮುದಾಯಕ್ಕೆ ಸೇರಿದವರು. ಅವರ ಸಮುದಾಯ ಬಿಜೆಪಿ ಪಕ್ಷಕ್ಕೆ ಮತ ಹಾಕುವುದಿಲ್ಲವೆಂದು ನಿರ್ಣಯಿಸಿಯೋ ಅಥವಾ ಜಾತಿ ಸಮೀಕರಣದಿಂದಾಗಿಯೋ ಏನೋ ಒಟ್ಟಿನಲ್ಲಿ ಈ ಭಾಗದಿಂದ 'ಬಲ' ಸಮುದಾಯಕ್ಕೆ ಒಂದು ಟಿಕೆಟ್ ನೀಡಿಲ್ಲ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲ್ಯಾಣ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ. ಸಹಜವಾಗಿ ಈ ಭಾಗದಿಂದ ಹೆಚ್ಚು ಕಾಂಗ್ರೆಸ್ ಹುರಿಯಾಳುಗಳು ಗೆಲ್ಲಿಸಬೇಕೆಂಬ ಉಮೇದಿನಲ್ಲಿ ಅವರು ಇರುತ್ತಾರೆ. ಏಕೆಂದರೆ ಇದು ಅವರ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಏನೇನೋ ಬೇಕು ಅದೆಲ್ಲವೂ ಸಾಧ್ಯವಾದ ಮಟ್ಟಿಗೆ ಮಾಡುತ್ತಾರೆ.

ಬಿಜೆಪಿಯೂ ಈ ಭಾಗದ ಮೇಲೆ ಅತಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ. ಇಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಎಐಸಿಸಿ ಅಧ್ಯಕ್ಷರೆ ತಮ್ಮ ಭಾಗದಲ್ಲೇ ತಮ್ಮ ಪಕ್ಷವನ್ನು ಗೆಲ್ಲಿಸಿಲ್ಲ, ಇನ್ನೂ ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಇವರು ಗೆಲ್ಲಿಸಲು ಸಾಧ್ಯವೇ ಎಂದು ಜನರೆದುರು ಸಾರಲು ತುದಿಗಾಲಲ್ಲಿ ನಿಂತಿದೆ. ಅದಕ್ಕಾಗಿಯೇ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದೆ.

ಖರ್ಗೆಯವರು ಪರಿಶಿಷ್ಟ ಜಾತಿಯ ‘ಬಲ’ ಸಮುದಾಯಕ್ಕೆ ಸೇರಿದವರು. ಅವರ ಸಮುದಾಯ ಬಿಜೆಪಿ ಪಕ್ಷಕ್ಕೆ ಮತ ಹಾಕುವುದಿಲ್ಲವೆಂದು ನಿರ್ಣಯಿಸಿಯೋ ಅಥವಾ ಜಾತಿ ಸಮೀಕರಣದಿಂದಾಗಿಯೋ ಏನೋ ಒಟ್ಟಿನಲ್ಲಿ ಈ ಭಾಗದಿಂದ ‘ಬಲ’ ಸಮುದಾಯಕ್ಕೆ ಒಂದು ಟಿಕೆಟ್ ನೀಡಿಲ್ಲ. ಇಲ್ಲಿ ಒಟ್ಟು ನಲ್ವತ್ತೊಂದು ಕ್ಷೇತ್ರಗಳಿವೆ. ಅದರಲ್ಲಿ ಎಂಟು ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದಾದರೂ ಒಂದೆರಡು ಕ್ಷೇತ್ರದಲ್ಲಾದರೂ ‘ಬಲ’ ಸಮುದಾಯಕ್ಕೆ ಸೇರಿರುವ ವ್ಯಕ್ತಿಗಳಿಗೆ ಟಿಕೆಟ್ ನೀಡಬೇಕಿತ್ತು. ಆದರೇಕೋ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಟು ಮೀಸಲು ಕ್ಷೇತ್ರಗಳಲ್ಲಿ ಲಂಬಾಣಿ ಸಮುದಾಯಕ್ಕೆ ನಾಲ್ಕು ಕ್ಷೇತ್ರಗಳಲ್ಲಿ, ಮಾದಿಗ ಸಮುದಾಯಕ್ಕೆ ಮೂರು ಕ್ಷೇತ್ರಗಳಲ್ಲಿ (ಮೂರರಲ್ಲಿ ಒಂದು ಕಡೆ ಎಡ ಸಮುದಾಯದ ‘ಸಮಗಾರ’ ಉಪಜಾತಿಗೆ ಮಣೆ ಹಾಕಿದೆ) ಮತ್ತು ಭೋವಿ ಸಮುದಾಯಕ್ಕೆ ಒಂದು ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ. ಟಿಕೆಟ್ ಹಂಚಿಕೆ ನೋಡಿದರೆ ಪರಿಶಿಷ್ಟ ಜಾತಿಯ ‘ಬಲ’ ಸಮುದಾಯ ಹೊರಗಿಟ್ಟು, ಎಡ, ಲಂಬಾಣಿ ಹಾಗೂ ಭೋವಿ ಸಮುದಾಯಕ್ಕೆ ಮಣೆ ಹಾಕಿ, ಅವರನ್ನು ಓಲೈಸಿಕೊಳ್ಳಲು ಮುಂದಾಗಿದ್ದು ಸ್ಪಷ್ಟವಾಗಿ ಕಾಣುತ್ತಿದೆ. ಈ ಪ್ರಯೋಗ ಬಿಜೆಪಿ ಪಕ್ಷಕ್ಕೆ ವರವಾಗುತ್ತದೆಯೋ ಅಥವಾ ಉಲ್ಟಾ ಹೊಡೆಯುತ್ತದೆಯೋ ಎಂಬುವುದು ಚುನಾವಣೆಯ ಫಲಿತಾಂಶವೆ ನಿರ್ಧರಿಸುತ್ತದೆ.

ಬಿಜೆಪಿ ಪಕ್ಷದಿಂದ ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಟಿಕೆಟ್ ಪಡೆದ ಅಭ್ಯರ್ಥಿಗಳು

ಔರಾದ – ಪ್ರಭು ಬಿ. ಚೌಹಾಣ್ (ಲಂಬಾಣಿ)

ಚಿಂಚೋಳಿ – ಅವಿನಾಶ್ ಜಾದವ್ (ಲಂಬಾಣಿ)

ಕಲಬುರ್ಗಿ ಗ್ರಾಮೀಣ: ಬಸವರಾಜ ಮತ್ತಿಮೂಡ
{ ಸಮಗಾರ (ಮಾದಿಗ ಸಮುದಾಯ ಉಪಜಾತಿ)}

ಚಿತ್ತಾಪುರ – ಮಣಿಕಂಠ ರಾಠೋಡ (ಲಂಬಾಣಿ)

ಲಿಂಗಸುಗೂರು – ಮಾನಪ್ಪ ವಜ್ಜಲ್ (ಭೋವಿ)

ಕನಕಗಿರಿ – ಬಸವರಾಜ ದಡೇಸುಗೂರು (ಮಾದಿಗ)

ಹೂವಿನ ಹಡಗಲಿ – ಕೃಷ್ಣ ನಾಯ್ಕ (ಲಂಬಾಣಿ)

ಹಗರಿಬೊಮ್ಮನಹಳ್ಳಿ – ಬಲ್ಲಾಹುಣ್ಸಿ ರಾಮಣ್ಣ (ಮಾದಿಗ)

49661542 294235811438250 5384525710729674752 n
ಸಿದ್ದಪ್ಪ ಮೂಲಗೆ
+ posts

ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಸಿದ್ದಪ್ಪ ಮೂಲಗೆ
ಸಿದ್ದಪ್ಪ ಮೂಲಗೆ
ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...