ಚುನಾವಣೆ 2023 | ಬಿಜೆಪಿ ವಿರುದ್ಧ ಹೊಸ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

Date:

ವಿಧಾನಸಭಾ ಚುನಾವಣಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇವೆ. ಈ ನಡುವೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಎದುರಿಸುತ್ತಿರುವ ‘40% ಕಮಿಷನ್‌’ ಆರೋಪವನ್ನು ಮುನ್ನೆಲೆಯಲ್ಲಿಟ್ಟುಕೊಂಡು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದೆ. ಅದಕ್ಕಾಗಿ, ವಿಡಿಯೋ ಒಂದನ್ನು ಸೋಮವಾರ ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

2021ರ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಗುತ್ತಿಗೆದಾರರ ಸಂಘ ಪತ್ರ ಬರೆದು, 40% ಕಮಿಷನ್ ಬಗ್ಗೆ ಆರೋಪ ಮಾಡಿತ್ತು. ಇದೇ ಸಮಯದಲ್ಲಿ, ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ, ಶಿಕ್ಷಕರ ನೇಮಕಾತಿ ಹಗರಣ, ಮೊಟ್ಟೆ ಹಗರಣ, ಕೋವಿಡ್ ಉಪಕರಣ ಖರೀದಿ ಹಗರಣ, ಬಿಬಿಎಂಪಿ ಟೆಂಡರ್‌ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್‌ನಲ್ಲಾದ ಅವ್ಯವಹಾರ ಸೇರಿದಂತೆ ಬಿಜೆಪಿ ಎದುರಿಸುತ್ತಿರುವ ವಿವಿಧ ಹಗರಣಗಳ ಆರೋಪಗಳನ್ನು ಕಾಂಗ್ರೆಸ್ ವೀಡಿಯೊದಲ್ಲಿ ಉಲ್ಲೇಖಿಸಿದೆ.

ರಾಜ್ಯದಲ್ಲಿ ಭ್ರಷ್ಟಾಚಾರ, ಕಮಿಷನ್ ಮತ್ತು ಕೋಮುವಾದಕ್ಕೆ ಸ್ಥಾನವಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ. 40% ಕಮಿಷನ್‌ ಪಡೆಯುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಜನರನ್ನು ಪ್ರತಿನಿಧಿಸುವ ಸರ್ಕಾರವನ್ನು ಅಧಿಕಾರಕ್ಕೆ ತರಲು ಇದು ಸಕಾಲವೆಂದು ಕಾಂಗ್ರೆಸ್‌ ಒತ್ತಿ ಹೇಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಚುನಾವಣೆಯಲ್ಲಿ ಕಾಂಗ್ರೆಸ್‌ಅನ್ನು ಜನರು ಬೆಂಬಲಿಸಬೇಕು. ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಮಾಡಬೇಕೆಂದು ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. “ಅವರು (ಬಿಜೆಪಿ ಸರ್ಕಾರ) 40% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ, ಅವರಿಗೆ ಕೇವಲ 40 ಸೀಟುಗಳನ್ನು ಈ ಬಾರಿ ನೀಡಬೇಕು,” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ನಾಲ್ಕು ಚುನಾವಣಾ ‘ಖಾತರಿ’ಗಳನ್ನು ಘೋಷಿಸಿದೆ – ಎಲ್ಲ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ 2,000 ರೂ (ಗೃಹ ಲಕ್ಷ್ಮಿ), ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ (ಅನ್ನ ಭಾಗ್ಯ), ಮತ್ತು ಪದವೀಧರ ಯುವಕರಿಗೆ ಪ್ರತಿ ತಿಂಗಳು ರೂ 3,000 ನಿರುದ್ಯೋಗ ಭತ್ಯೆ (ಯುವನಿಧಿ) ನೀಡುವ ಭರವಸೆ ನೀಡಿದೆ.

ಈ ಸುದ್ದಿ ಓದಿದ್ದೀರಾ?: ಕಾರವಾರ | ಬಿಜೆಪಿ ನಾಯಕರು ನನ್ನಿಂದ ಹಣ ಪಡೆದು ಟಿಕೆಟ್ ತಪ್ಪಿಸಿದ್ದಾರೆ : ಗಂಗಾಧರ ಭಟ್ ಕಣಕ್ಕೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...