ಚುನಾವಣಾ ಅಕ್ರಮ | ಸಿವಿಜಿಲ್ ಆ್ಯಪ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ದೂರು ದಾಖಲು

Date:

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಮೇ 10ರಂದು ಮತದಾನ ನಡೆಯಲಿದೆ. ಈ ನಡುವೆ, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ತೆರೆಮರೆಯಲ್ಲಿ ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ. ಹಲವೆಡೆ ಹಣ ಹಂಚುವಾಗ ಪಕ್ಷಗಳ ಕಾರ್ಯಕರ್ತರು ಸಿಕ್ಕಿಬಿದ್ದಿರುವ ವರದಿಗಳಾಗಿವೆ. ಅಂತೆಯೇ, ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ಚುನಾವಣಾ ಆಯೋಗ ತೆರೆದಿರುವ ಸಿವಿಜಿಲ್ (cVIGIL)​ ಆ್ಯಪ್‌ನಲ್ಲಿ ಈವರೆಗೆ 6,711 ದೂರು ದಾಖಲಾಗಿವೆ ಎಂದು ತಿಳಿದುಬಂದಿದೆ.

ಚುನಾವಣಾ ದೂರುಗಳಿಗೆ ಸಂಬಂಧಿಸಿದಂತೆ ಆಯೋಗವು ಪ್ರಕರಣೆ ಹೊರಡಿಸಿದೆ. “ಆ್ಯಪ್‌ ಮೂಲಕ ಬಂದಿರುವ 6,711 ದೂರುಗಳಲ್ಲಿ ಹೆಚ್ಚಿನ ದೂರುಗಳು ಅನುಮತಿಯಿಲ್ಲದೆ ಬ್ಯಾನರ್ ಹಾಕಿರುವುದಕ್ಕೆ ಸಂಬಂಧಿಸಿವೆ. ಉಳಿದಂತೆ, ಮತದಾರರಿಗೆ ಆಮಿಷವೊಡ್ಡಲು ಹಣ, ಉಡುಗೊರೆ, ಮದ್ಯ ಹಿಂಚಿಕೆಗೆ ಸಂಬಂಧಿಸಿದ ದೂರುಗಳು ದಾಖಲಾಗಿವೆ. ಆ ಪೈಕಿ, 1,348 ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ” ಎಂದು ಹೇಳಿದೆ.

ಬೆಂಗಳೂರಿನಲ್ಲಿ ಹೆಚ್ಚು ದೂರುಗಳು ದಾಖಲಾಗಿದ್ದು, ಕಳೆದ ಒಂದು ವಾರದಲ್ಲಿ 1,771 ದೂರುಗಳು ದಾಖಲಾಗಿವೆ. ಇವುಗಳ ಪೈಕಿ ಮೇ 9ರಂದು ಒಂದೇ ದಿನ 690 ದೂರುಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...