ಬುಡಕಟ್ಟು ಜನಾಂಗದವರಿಗೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆ ಸ್ಥಾಪನೆ

Date:

ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಬುಡಕಟ್ಟು ಜನಾಂಗದರಿಗೆ ಪ್ರತ್ಯೇಕವಾಗಿ 40 ಸಾಂಪ್ರದಾಯಿಕ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮತ್ತು ಸಾಂಪ್ರದಾಯಿಕ ಮತಗಟ್ಟೆಗಳ ರಾಜ್ಯ ನೊಡೆಲ್‌ ಅಧಿಕಾರಿ ಕೆ ಆರ್ ರಾಜಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜ್ಯದ 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ, ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಈ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ 2011ರ ಜನಗಣತಿ ಪ್ರಕಾರ ಪರಿಶಿಷ್ಟ ಪಂಗಡದವರ ಜನಸಂಖ್ಯೆಯು 42,48,987 ರಷ್ಟಿದೆ. ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ, ಜೇನುಕುರುಬ, ಕೊರಗ, ಮಲೈಕುಡಿಯ, ಸಿದ್ದಿ ಇನ್ನು ಮುಂತಾದ ಆದಿವಾಸಿ ಜನಾಂಗದವರ ಜನಸಂಖ್ಯೆ ಸುಮಾರು 2 ಲಕ್ಷಕ್ಕೂ ಅಧಿಕವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮುದಾಯದವರು ಅರಣ್ಯವನ್ನು ಅವಲಂಬಿಸಿ, ಕಿರು ಅರಣ್ಯ ಉತ್ಪನ್ನಗಳಿಂದ ಜೀವನ ಸಾಗಿಸುತ್ತಿರುತ್ತಾರೆ. ಪ್ರಮುಖವಾಗಿ ಮೈಸೂರು, ಚಾಮರಾಜನಗರ, ಕೊಡಗು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಹಾಸನ ಈ 9 ಜಿಲ್ಲೆಗಳಲ್ಲಿ ಹೆಚ್ಚಾಗಿ ವಾಸವಾಗಿದ್ದಾರೆ” ಎಂದು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...