ʼಬಿಬಿಸಿʼ ಹೆಸರಿನಲ್ಲಿ ಬಿಜೆಪಿ ಪರ ನಕಲಿ ಸಮೀಕ್ಷೆ

Date:

  • ಬಿಜೆಪಿ 140 ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ನಕಲಿ ಸಮೀಕ್ಷೆ
  • ಭಾರತದಲ್ಲಿ ಚುನಾವಣಾ ಸಮೀಕ್ಷೆ ನಡೆಸಲ್ಲ ಎಂದು 2018ರಲ್ಲೇ ಸ್ಪಷ್ಟಪಡಿಸಿದ್ದ ಬಿಬಿಸಿ

ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ʼಬಿಬಿಸಿʼ ಸಂಸ್ಥೆಯ ಹೆಸರಿನಲ್ಲಿ ಚುನಾವಣಾಪೂರ್ವ ನಕಲಿ ಸಮೀಕ್ಷೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಭಾರತದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸುವುದಿಲ್ಲ ಎಂದು ಸಂಸ್ಥೆ ಈ ಹಿಂದೆಯೇ ಸ್ಪಷ್ಟಪಡಿಸಿದೆ.

ʼಬಿಬಿಸಿʼ ಸಂಸ್ಥೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿರುವ ಈ ನಕಲಿ ಚುನಾವಣಾ ಪೂರ್ವ ಸಮೀಕ್ಷೆಯ ವರದಿಯ ಪೋಸ್ಟರ್‌ ಅನ್ನು ʼಸುಪ್ರೀಮ್‌ ತೇಲಿ ಬಿಜೆಪಿʼ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಈ ನಕಲಿ ಸಮೀಕ್ಷೆಯ ವರದಿಯಲ್ಲಿ, ʼಬಿಜೆಪಿ ಈ ಬಾರಿ ರಾಜ್ಯದಲ್ಲಿ 130 ರಿಂದ 142 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ. 58 ರಿಂದ 66 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಜೆಡಿಎಸ್‌ 22 ರಿಂದ 29 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ. 1 ರಿಂದ 3ರ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.‌ ಆಡಳಿತಾರೂಢ ಬಿಜೆಪಿ 140ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆʼ ಎಂದು ಪ್ರದೇಶವಾರು ಸಮೀಕ್ಷೆ ನಡೆಸಿರುವುದಾಗಿಯೂ ಸುಳ್ಳು ವರದಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Fake BBC survey

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ʼದಿ ಕ್ವಿಂಟ್‌ʼ ವರದಿ ಮಾಡಿದ್ದು, “ಬಿಬಿಸಿ ಈ ಬಾರಿಯ ಕರ್ನಾಟಕ ಚುನಾವಣೆಯ ಕುರಿತು ಯಾವುದೇ ಸಮೀಕ್ಷೆಯನ್ನು ನಡೆಸಿಲ್ಲ. ಬಿಬಿಸಿ ಹೆಸರಿನಲ್ಲಿ ಸುಳ್ಳಿ ಸಮೀಕ್ಷೆ ವರದಿ ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗುತ್ತಿದೆ. ಸಮೀಕ್ಷೆಯ ಪೋಸ್ಟರ್‌ ಜೊತೆಗೆ ʼಬಿಬಿಸಿ ಹಿಂದಿʼ ವೆಬ್‌ ತಾಣದ ಕರ್ನಾಟಕ ವಿಭಾಗದ ಲಿಂಕ್‌ ಅನ್ನು ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಆ ಲಿಂಕ್‌ ಒತ್ತಿ ನೋಡಿದರೆ, ಕರ್ನಾಟಕ ವಿಭಾಗದ ಸುದ್ದಿಯ ಪುಟ ತೆರೆದುಕೊಳ್ಳುತ್ತದೆಯೇ ಹೊರತು ಸಮೀಕ್ಷೆಯಲ್ಲ” ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ 2018ರ ಚುನಾವಣೆಯ ಸಂದರ್ಭದಲ್ಲೂ ಇದೇ ರೀತಿ ಸುಳ್ಳು ಸಮೀಕ್ಷೆಯ ವರದಿ ಹರದಾಡಿದ್ದಾಗ ಭಾರತದಲ್ಲಿ ನಾವು ಯಾವುದೇ ರೀತಿಯ ಚುನಾವಣಾ ಪೂರ್ವ ಸಮೀಕ್ಷೆ ನಡೆಸುವುದಿಲ್ಲ. ಸಂಸ್ಥೆಯ ಹೆಸರಿನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಬಿಬಿಸಿ ಸಂಸ್ಥೆ ಟ್ವೀಟ್‌ ಮೂಲಕ ಮತದಾರರನ್ನು ಎಚ್ಚರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...