‘ಕುಟುಂಬ ರಾಜಕಾರಣ’ : ಬಿಜೆಪಿಯ ಗೋಸುಂಬೆ ರಾಜಕಾರಣ ಶಿಖರಕ್ಕೇರಿದೆ ಎಂದ ಜೆಡಿಎಸ್‌

Date:

  • ಹಾಸನ ಟಿಕೆಟ್ ವಿಚಾರ ಉಲ್ಲೇಖಿಸಿ ಕುಹಕ
  • ‘ಬಿಜೆಪಿಯದು ಹಲಾಲುಟೋಪಿ ರಾಜಕಾರಣ’

ಬಿಜೆಪಿಯ ಮೂರನೇ ಪಟ್ಟಿಯಲ್ಲಿಯೂ ಸಹ ಕುಟುಂಬದವರಿಗೆ ಟಿಕೆಟ್ ನೀಡಿರುವ ಕುರಿತು ಜೆಡಿಎಸ್‌ ವ್ಯಂಗ್ಯವಾಡಿದೆ.

ಈ ಹಿಂದೆ ಬಿಜೆಪಿ ಸದಾ ಕುಟುಂಬ ರಾಜಕಾರಣದ ಕುರಿತು ಕುಟುಕಿತ್ತು. ಆದರೆ, ಈ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಸ್ಥಾನಗಳನ್ನು ರಾಜಕಾರಣದ ಹಿನ್ನೆಲೆಯ ಕುಟುಂಬದವರಿಗೆ ನೀಡಿದ್ದು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಬಿಜೆಪಿಯ ಮೂರನೇ ಪಟ್ಟಿ ಉಲ್ಲೇಖಿಸಿರುವ ಜೆಡಿಎಸ್‌ ಸರಣಿ ಟ್ವೀಟ್ ಮಾಡಿ ಕಮಲ ಪಡೆ ವಿರುದ್ಧ ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೋಸುಂಬೆ ರಾಜಕಾರಣದ ಶಿಖರಕ್ಕೇರಿ, ಜನತೆಗೆ ಮಂಕುಬೂದಿ ಎರಚುವ ಬಿಜೆಪಿ ಬರೀ ಅಪಪ್ರಚಾರ ಮಾಡುವುದರಲ್ಲಿ ಸೈ ಎನಿಸಿಕೊಳ್ಳುತ್ತದೆ” ಎಂದು ಜೆಡಿಎಸ್‌ ಟ್ವೀಟ್ ಮಾಡಿದೆ.

“ಕುಟುಂಬ ರಾಜಕಾರಣ ಅಂತೆಲ್ಲ ಕತೆ ಹೇಳುತ್ತಾ, ತಾನು ಮಾತ್ರ ಕುಟುಂಬ ಸದಸ್ಯರಿಗೆ ಟಿಕೆಟ್ ಘೋಷಣೆ ಮಾಡಿ ಠೇಂಕರಿಸುತ್ತದೆ. ಇಂತಹ ನಾಚಿಕೆಗೆಟ್ಟ ರಾಜಕಾರಣ ಹೇಸಿಗೆ ತರಿಸುವಂತದ್ದು” ಎಂದು ಹೇಳಿದೆ.

ಹಾಸನ ಟಿಕೆಟ್‌ ವಿಚಾರವನ್ನು ಪ್ರಸ್ತಾಪಿಸಿದ ಜೆಡಿಎಸ್‌, “ನಾವು ಮಾತು ಕೊಟ್ಟಂತೆ ಹಾಸನದ ಟಿಕೆಟ್ ಅನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ಸ್ವರೂಪ್ ಅವರಿಗೆ ನೀಡಿದೆ. ಮಾತು ತಪ್ಪದೇ ಬದ್ಧತೆ ತೋರುವುದು ನಮ್ಮಿಂದ ಮಾತ್ರ ಸಾಧ್ಯ” ಎಂದು ಕುಟುಕಿದೆ.

“ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಮಗ ಕಟ್ಟಾ ಜಗದೀಶ್‌ಗೆ ಟಿಕೆಟ್ ಘೋಷಿಸಿರುವ ಬಿಜೆಪಿಗೆ ಕುಟುಂಬ ರಾಜಕಾರಣ ಎಂದು ಮಾತನಾಡಲು ಯಾವ ನೈತಿಕತೆ ಇದೆ?” ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಸುದದಿ ಓದಿದ್ದೀರಾ? ತುಮಕೂರಿನಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಸ್ವತಂತ್ರ ಅಭ್ಯರ್ಥಿಯಾದ ಸೊಗಡು ಶಿವಣ್ಣ

“ನಿನ್ನೆ ಬಿಡುಗಡೆಯಾದ ಬಿಜೆಪಿಯ ಮೂರನೇ ಪಟ್ಟಿಯಲ್ಲಿ ಸಂಸದ ಕರಡಿ ಸಂಗಣ್ಣನವರ ಹಿರಿ ಸೊಸೆ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿಯವರ ಪತ್ನಿಗೂ ಟಿಕೆಟ್ ನೀಡಲಾಗಿದೆ” ಎಂದು ಹೇಳಿದೆ.

“ಇವರೆಲ್ಲರ ನಡುವೆ ಮೋಸಗೊಂಡವರು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪನವರು,‌ ಪಾಪ! ಮಾತಿಗೂ ಕೃತಿಗೂ ಸಂಬಂಧವೇ ಇಲ್ಲದ ಹಲಾಲುಟೋಪಿ ರಾಜಕಾರಣ ಬಿಜೆಪಿಯದ್ದು!” ಎಂದು ಬಿಜೆಪಿಯ ಕಾಲೆಳೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...