ಗೀತಾ ಶಿವರಾಜಕುಮಾರ್ ಕಾಂಗ್ರೆಸ್‌ ಸೇರ್ಪಡೆ

Date:

ಮಾಜಿ ಮುಖ್ಯಮಂತ್ರಿ ಎಸ್‌ ಬಂಗಾರಪ್ಪ ಅವರ ಪುತ್ರಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್‌ ಅವರು ಶುಕ್ರವಾರ ಕಾಂಗ್ರೆಸ್‌ ಸೇರಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಡಿ ಕೆ ಶಿವಕುಮಾರ್‌ ಅವರು ಡಾ. ರಾಜಕುಮಾರ್‌ ಅವರ ಸೊಸೆಯನ್ನು ಪಕ್ಷದ ಬಾವುಟ ನೀಡಿ ಬರ ಮಾಡಿಕೊಂಡರು.

ಬಳಿಕ ಮಾತನಾಡಿದ ಡಿ ಕೆ ಶಿವಕುಮಾರ್‌, “ಎಸ್‌ ಬಂಗಾರಪ್ಪ ಕುಟುಂಬಕ್ಕೆ ಬಹಳ ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ. ಮಧು ಬಂಗಾರಪ್ಪ ಬಂದರು. ಈಗ ನನ್ನ ಸಹೋದರಿ ಗೀತಾ ಶಿವರಾಜಕುಮಾರ್‌ ಅವರು ಬಲೆಗೆ ಬಿದ್ದಿದ್ದಾರೆ” ಎಂದು ತಮಾಷೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿ ಅವರು ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಯೋಜನೆ ಘೋಷಿಸಿದ್ದಾರೆ. ರಾಹುಲ್‌ ಗಾಂಧಿ ಅವರ ಬಲೆಗೆ ಗೀತಾ ಶಿವರಾಜಕುಮಾರ್‌ ಬಿದ್ದಿದ್ದಾರೆ. ನನ್ನ ನಾಯಕ ಬಂಗಾರಪ್ಪ ಪುತ್ರಿ ಕಾಂಗ್ರೆಸ್‌ ಸೇರಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಖುದ್ದು ರಾಹುಲ್‌ ಗಾಂಧಿ ಅವರೇ ನನ್ನನ್ನು ಇಲ್ಲಿಗೆ ಕಳುಹಿಸಿ ಗೀತಾ ಶಿವರಾಜಕುಮಾರ್‌ ಅವರನ್ನು ಬರಮಾಡಿಕೊಳ್ಳಲು ಸೂಚಿಸಿದ್ದಾರೆ” ಎಂದು ಹೇಳಿದರು.

ಹಾಗೆಯೇ ಮೂಡಿಗೆರೆ ಕ್ಷೇತ್ರದಲ್ಲಿ ವಿಚಲಿತ ರಾಜಕಾರಣ ನಡೆಯುತ್ತಿದೆ. ಬಿಜೆಪಿ ಬಿಟ್ಟು ಜೆಡಿಎಸ್‌ ಸೇರಿದ್ದ ಸಜ್ಜನ ರಾಜಕಾರಣಿ ಮಾಜಿ ಸಚಿವ ಬಿಬಿ ನಿಂಗಯ್ಯ ಅವರು ಟಿಕೆಟ್‌ ವಂಚಿತರಾಗಿದ್ದು, ಜೆಡಿಎಸ್‌ ಪಕ್ಷದ ನಡೆಗೆ ಬೇಸತ್ತು ಕಾಂಗ್ರೆಸ್‌ ಸೇರಿದ್ದಾರೆ. ಇನ್ನು ಶಾಂತಿನಗರ ಮಾಜಿ ಕಾರ್ಪೋರೇಟರ್‌ ತುಳಸಿರಾಮ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಅಲ್ಲದೇ ದೊಮ್ಮಲೂರು ಕಾರ್ಪೋರೇಟರ್ ಗೀತಾ ಶ್ರೀನಿವಾಸ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...