ಸಚಿವ ಸೋಮಣ್ಣ ವಿರುದ್ಧ ಸಿಡಿದೆದ್ದ ಚಾಮರಾಜನಗರದ ಬಿಜೆಪಿಗರು

Date:

  • ಚಾಮರಾಜನಗರದಲ್ಲಿ ವಿ ಸೋಮಣ್ಣ ವಿರುದ್ಧ ಸಿಡಿದ ಆಕ್ರೋಶ
  • ಜಿಲ್ಲಾ ಚುನಾವಣಾ ಉಸ್ತುವಾರಿ ಕೊಡದಂತೆ ಪಕ್ಷಕ್ಕೆ ಮನವಿ

ಕಾಂಗ್ರೆಸ್ ಪಕ್ಷ ಸೇರಲು ಹೊರಟಿರುವ ಸಚಿವ ವಿ ಸೋಮಣ್ಣ ಅವರಿಗೆ ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ವಲಯ ಒತ್ತಾಯಿಸಿದೆ.

ಮಂಗಳವಾರ ಈ ಕುರಿತಂತೆ ಚಾಮರಾಜನಗರದಲ್ಲಿ ಸ್ಥಳೀಯ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖಂಡ ಅಯ್ಯನಪುರ ಶಿವಕುಮಾರ್ ಸೋಮಣ್ಣ ವಿರುದ್ಧ ಆಕ್ರೋಶ ಹೊರಹಾಕಿದರು.

ಸೋಮಣ್ಣ ಕಾಂಗ್ರೆಸ್ ಸೇರುವ ಊಹಾಪೋಹವಿದೆ. ಚಾಮರಾಜನಗರ ಜಿಲ್ಲೆಯ ಯಾವುದೇ ಕ್ಷೇತ್ರದಿಂದ ಅವರು ಅಭ್ಯರ್ಥಿಯಾಗಬಾರದು. ಕಳೆದ ಚುನಾವಣೆಯಲ್ಲಿ ಸೋಮಣ್ಣ ನಮ್ಮ ಪಕ್ಷದ ಪರ ಕೆಲಸ ಮಾಡಿಲ್ಲ. ನಮ್ಮವರನ್ನು ಸೋಲಿಸಿದ ಅಭ್ಯರ್ಥಿಗೆ ಮನೆ ಗಿಫ್ಟ್ ಕೊಟ್ಟಿದ್ದಾರೆ. ಹಾಗೆಯೇ ಲೋಕಸಭಾ ಚುನಾವಣೆಯಲ್ಲೂ ಅವರು ಪಕ್ಷದ ಪರ ಕೆಲಸ ಮಾಡಿಲ್ಲ. ಹೀಗಾಗಿ ಅವರಿಗೆ ಇಲ್ಲಿಂದ ಸ್ಪರ್ಧಿಸಲು ಟಿಕೆಟ್ ಕೊಡಬಾರದು ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಗೆ ಚಾಮರಾಜನಗರ ಚುನಾವಣಾ ಉಸ್ತುವಾರಿ ಮತ್ತು ಟಿಕೆಟ್ ನೀಡಬೇಕು. ಇಲ್ಲವಾದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಅವರು ದೆಹಲಿ ನಾಯಕರಿಗೆ ಹೇಳಿದ್ದಾರಂತೆ, ಈ ವಿಚಾರದ ಬಗ್ಗೆ ನಾನು ಸಮಾಜಕ್ಕೆ ಮಾಹಿತಿ ನೀಡುತ್ತೇನೆ ಎನ್ನುವ ವಿಚಾರ ತಿಳಿಸಿ ತಕ್ಷಣವೇ ನನಗೆ ಸುದ್ದಿಗೋಷ್ಠಿ ಮಾಡದಂತೆ ಬ್ಲಾಕ್‌ಮೇಲ್‌ ಮಾಡಿದ್ದಾರೆ. ಫೋನ್ ಮಾಡಿ ಎಚ್ಚರಿಕೆ ನೀಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಸೋಮಣ್ಣ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಲ್ಲ. ಜನ ಸಂಕಲ್ಪ ರಥಯಾತ್ರೆಯಲ್ಲೂ ಪಾಲ್ಗೊಳ್ಳಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವ ರೀತಿ ನಡೆದುಕೊಂಡಿದ್ದಾರೆ.

ಜಿಲ್ಲೆಗೆ ಸೋಮಣ್ಣ ಬೇಕು ಎನ್ನುವವರು ಅವರ ಕೆಲವು ಬೆಂಬಲಿಗರು ಮಾತ್ರ. ಪಕ್ಷಕ್ಕಾಗಿ ಇರುವವರು ಸೋಮಣ್ಣ ಬೇಡ ಎನ್ನುತ್ತಾರೆ. ಹೀಗಾಗಿ ಸೋಮಣ್ಣಗೆ ನಮ್ಮ ಜಿಲ್ಲೆಯ ಯಾವ ಜವಾಬ್ದಾರಿಯನ್ನೂ ಹೊರಿಸಬಾರದು, ಪಕ್ಷವೂ ಯಾವುದೇ ಹೊಣೆಗಾರಿಕೆ ಕೊಡಬಾರದು ಎಂದು ಶಿವಕುಮಾರ್ ಆಗ್ರಹಿಸಿದರು.

ಒಂದು ವೇಳೆ ಇದನ್ನೂ ಮೀರಿ ಪಕ್ಷ ನಿರ್ಧಾರ ಕೈಗೊಂಡರೆ ಅವರ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಅಯ್ಯನಪುರ ಶಿವಕುಮಾರ್ ಎಚ್ಚರಿಕೆ ನೀಡಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...