ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

Date:

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ತಮಗೆ ಟಿಕೆಟ್ ತಪ್ಪಿಸಿರುವ ವಿಷಯ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕಿಲ್ಲ ಎಂದು ಪಕ್ಷ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ್ ಅವರ ಹೇಳಿಕೆಗೆ ಜೋಶಿ ತಿರುಗೇಟು ನೀಡಿದರು.

“ಮೋದಿ, ಅಮಿತ್ ಶಾ ವಿರುದ್ಧ ಆಪಾದನೆ ಮಾಡಿದರೆ ಜನ ತಮಗೆ ಮತ ಹಾಕಲ್ಲ ಎಂಬುದು ಅವರಿಗೂ ಗೊತ್ತಿದೆ. ಈ ಕಾರಣಕ್ಕೆ ಅವರು ಮೋದಿ, ಅಮಿತ್ ಶಾ ಅವರಿಗೆ ಈ ವಿಷಯ ಗೊತ್ತಿಲ್ಲ ಎನ್ನುವ ಮೂಲಕ ತಮ್ಮ ರಾಜಕೀಯ ಸ್ಥಾನದ ರಕ್ಷಣೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖುದ್ದು ಅಮಿತ್ ಶಾ ಅವರೇ ಶೆಟ್ಟರ್ ಅವರಿಗೆ ಕಾಲ್‌ ಮಾಡಿ, ರಾಜ್ಯಸಭಾ ಸದಸ್ಯ ಸ್ಥಾನ ಅಥವಾ ನೀವು ಕೇಳುವ ಬೇರೆ ಯಾವುದಾದರೂ ಸ್ಥಾನ ನೀಡುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಹೊಸಬರಿಗೆ ಅವಕಾಶ ಮಾಡಿಕೊಡಿ. ನೀವು ಹೇಳುವ ಕಾರ್ಯಕರ್ತನಿಗೇ ಟಿಕೆಟ್ ನೀಡುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ, ಇದ್ಯಾವುದನ್ನು ಲೆಕ್ಕಿಸದೇ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದಾರೆ” ಎಂದು ತಿಳಿಸಿದರು.

“ಬಿ ಎಲ್ ಸಂತೋಷ ಅವರು ನಮ್ಮ ಪಕ್ಷದ ಸಂಘಟನಾ ಕಾರ್ಯದರ್ಶಿ. ಪಕ್ಷ ಕಟ್ಟುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಶೆಟ್ಟರ್ ಎಳೆದು ತಂದಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್‌ ತಪ್ಪಲು ಸಂತೋಷ ಕಾರಣರಲ್ಲ. ಶೆಟ್ಟರ್ ಒಬ್ಬರೇ ಈ ರೀತಿ ಸಂತೋಷ್‌ ಹೆಸರು ಹೇಳುತ್ತಿರುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...