ಕರಂದ್ಲಾಜೆ ವಿವಾದಾತ್ಮಕ ಪತ್ರ | ಚುನಾವಣೆ ನಡೆಸುತ್ತಿರುವುದು ಆಯೋಗವೋ, ಬಿಜೆಪಿಯೋ: ಸಿದ್ದರಾಮಯ್ಯ ಪ್ರಶ್ನೆ

Date:

  • ಕರಂದ್ಲಾಜೆಯಿಂದ ಮಾಹಿತಿ ವಶಕ್ಕೆ ಸಿದ್ದರಾಮಯ್ಯ ಒತ್ತಾಯ
  • ಕೇಂದ್ರ ಚುನಾವಣಾ ಆಯುಕ್ತರ ಮಧ್ಯಪ್ರವೇಶಕ್ಕೆ ಆಗ್ರಹ

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಪಕ್ಷದ ಪಧಾದಿಕಾರಿಗಳಿಗೆ ಪತ್ರ ಬರೆದು ಕ್ಷೇತ್ರದ ಸೂಕ್ಷ್ಮ – ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತನಿಖೆಗೆ ಒತ್ತಾಯಿಸಿದ್ದಾರೆ.

“ಯಾವ ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಎಂದು ಘೋಷಿಸಬೇಕು. ಯಾವ ಭಾಗಗಳಲ್ಲಿ ಕೇಂದ್ರ ಸೇನಾಪಡೆಗಳು, ಅಥವಾ ಅರೇ ಸೇನಾಪಡೆ ತುಕಡಿಗಳನ್ನು ನಿಯೋಜಿಸಬೇಕು ಹಾಗೂ ಯಾವ ಮತಗಟ್ಟೆಗಳಿಗೆ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಸೇವೆ ಅಗತ್ಯವಿದೆ ಎನ್ನುವುದನ್ನು ಪದಾಧಿಕಾರಿಗಳು ಬೇಗ ತಿಳಿಸಬೇಕು” ಎಂದು ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು
ಚುನಾವಣಾ ಆಯೋಗವೋ? ಬಿಜೆಪಿಯೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ” ಎಂದು ಆರೋಪಿಸಿದ್ದಾರೆ.

“ಚುನಾವಣಾ ಮತಗಟ್ಟೆಗಳಲ್ಲಿ ‘ವೆಬ್ ಕಾಸ್ಟಿಂಗ್’ ಮತ್ತು ‘ವಿಡಿಯೋ ರೆಕಾರ್ಡಿಂಗ್’ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

“ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...