ಕೋಲಾರ | ಬಿಜೆಪಿ ಅಭ್ಯರ್ಥಿಗಳ ಪರ ನಟ ದರ್ಶನ್ ಪ್ರಚಾರ

Date:

ಬಿಜೆಪಿ ಪರವಾಗಿ ನಟ ಸುದೀಪ್‌ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ನಡುವೆ, ನಟ ದರ್ಶನ್‌ ಕೂಡ ಬಿಜೆಪಿಯ ವಿವಿಧ ಅಭ್ಯರ್ಥಿಗಳ ಪರವಾಗಿ ಕಣಕ್ಕಿಳಿದು, ಪ್ರಚಾರ ಆರಂಭಿಸುತ್ತಿದ್ದಾರೆ. ಶುಕ್ರವಾರ ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್‌, ಕೋಲಾರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಪರ ದರ್ಶನ್ ಪ್ರಚಾರ ಮಾಡಲಿದ್ದಾರೆ.

ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂದು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ, “ದರ್ಶನ್‌ ರವರಿಗೆ ಬಂಗಾರಪೇಟೆ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಅಭಿಮಾನಿಗಳಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರ ಜೊತೆಗೆ ಅವರು ಕೂಡ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ದರ್ಶನ್‌ ರವರು ಪಟ್ಟಣದ ಕೋಲಾರದ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ದರ್ಶನ್‌ ರವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೋಡ್‌ ಶೋದಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...