ಕೋಲಾರ | ದಲಿತರ ಸ್ವಾಭಿಮಾನ ಮಾರಾಟಕ್ಕಿಟ್ಟವರಿಗೆ ಪಾಠ ಕಲಿಸುತ್ತೇವೆ: ದಲಿತ ಮುಖಂಡ ನಾರಾಯಣಸ್ವಾಮಿ

Date:

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ದಲಿತರ ಸ್ವಾಭಿಮಾನವನ್ನು ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಬಳಿ ಮಾರಾಟಕ್ಕೆ ಇಟ್ಟಿರುವ ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ ಮತ್ತು ಅವರ ತಂಡಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ದಲಿತ ಮುಖಂಡ ಆಟೋ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಕೋಲಾರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಜಿಲ್ಲೆಯಲ್ಲಿ ಕಾಂಗ್ರೆಸ್‌ ನಿರ್ನಾಮಕ್ಕೆ ಕೊತ್ತೂರು ಮಂಜುನಾಥ್ ನೇರ ಕಾರಣ. ಅಂತಹ ವ್ಯಕ್ತಿಗೆ ಓಟು ಕೇಳಲು ನಿಮಗೆ (ಮುನಿಯಪ್ಪ) ನೈತಿಕತೆ ಇದ್ದೀಯಾ? ನೀವು ಎಲ್ಲ ದಲಿತ ಚಳುವಳಿಯಲ್ಲಿ ಇದ್ದು, ಯಾರನ್ನು ಉದ್ದಾರ ಮಾಡಿದ್ದೀರಾ? ಕೇವಲ ನಿಮ್ಮ ಸ್ವಾರ್ಥಕ್ಕಾಗಿ ದಲಿತ ಮತದಾರರನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಆರ್ಥಿಕವಾಗಿ ಲಾಭಗಳಿಸಲು ಬೀದಿಗಿಳಿದಿದ್ದೀರಾ! ದಲಿತರು ಸ್ವಾಭಿಮಾನದ ಜನ ನಿಮಗೆಲ್ಲ ಉತ್ತರ ನೀಡಲಿದ್ದಾರೆ” ಎಂದರು.

“ಸಮಾಜದಲ್ಲಿ ಅಂಬೇಡ್ಕರ್ ಬರೆದ ಸಂವಿಧಾನಕ್ಕೆ ಗೌರವ ಕೊಡದೇ ಮೀಸಲಾತಿ ದುರುಪಯೋಗ ಪಡಿಸಿಕೊಂಡ ವ್ಯಕ್ತಿಯೊಂದಿಗೆ ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ? ದಲಿತರ ಬಗ್ಗೆ ಅವಮಾನ ಮಾಡಿದಾಗ ಎಲ್ಲಿ ಹೋಗಿದ್ದಿರಿ?” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಟಿಯಲ್ಲಿ ದಲಿತ ಮುಖಂಡರಾದ ಕುಮಾರ್, ಚಿನ್ನಾಪುರ ಅನಿಲ್ ಕುಮಾರ್, ಜಗನ್ನಾಥ್, ಖಾದ್ರಿಪುರ ನಾರಾಯಣಸ್ವಾಮಿ, ಗೋವಿಂದ, ವೆಂಕಟೇಶ್, ಅಕ್ರಮ್ ಖಾನ್ ಇದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...