20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

Date:

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರೂಪಕಲಾ ಶಶಿಧರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ವೇಳೆ ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಕೆಜಿಎಫ್ ತಾಲೂಕಿನಲ್ಲಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಒಟ್ಟು 5 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊದಲ ಬಾರಿಗೆ 5 ಕೋಟಿ ಅನುದಾನವು ಸಿಕ್ಕಿದ್ದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗುತ್ತಿದೆ, ಅದೇ ರೀತಿ ಸುಂದರಪಾಳ್ಯ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ಸಿಸಿ ರಸ್ತೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸ್ಥಳದಲ್ಲಿದ್ದು ಗುಣಮಟ್ಟದ ಕಾಮಗಾರಿಯನ್ನು ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ತಮ್ಮ ಹಲವು ಕುಂದು ಕೊರತೆಗಳನ್ನು ಶಾಸಕರಿಗೆ ತಿಳಿಸಿದರು. ರಸ್ತೆಯ ಮದ್ಯದಲ್ಲಿ ಇರುವ ವಿದ್ಯುತ್ ಕಂಬವನ್ನು ಸುಮಾರು ವರ್ಷಗಳಿಂದ ಸ್ಥಳಾಂತರಿಸಿರುವುದಿಲ್ಲ ಕಂಬವನ್ನು ಸ್ಥಳಂತಾರಿಸಲು ಕೋರಿದರು.

ಶಾಸಕರು ಕೂಡಲೇ ಸಂಬಂಧಪಟ್ಟ ಇಂಜಿನಿಯರ್ ರವರನ್ನು ಸ್ಥಳಕ್ಕೆ ಕರೆಸಿ ರಸ್ತೆ ಮದ್ಯದಲ್ಲಿರುವ ಕಂಬವನ್ನು ಸ್ಥಳಂತಾರಿಸಲು ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಂಬವನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎಂದು ಅಲ್ಲಿ ವಾಸಿಸುವವರ ತೀರ್ಮಾನದಂತೆ ಪಿ.ಡಿ.ಒ. ಮುಖಾಂತರ ಮಹಜರ್ ಬರೆಯಿಸಿ ಕೂಡಲೆ ಕಂಬವನ್ನು ಸ್ಥಳಂತಾರಿಸಲು ಬೆಸ್ಕಾಂ ಇಂಜಿನಿಯರ್ ಶ್ರೀ ಶ್ರೀನಿವಾಸಗೌಡ ರವರಿಗೆ ಮಾನ್ಯ ಶಾಸಕರು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ರಸ್ತೆ ಅಗೆದಿದ್ದು ರಸ್ತೆ ಮರು ನಿರ್ಮಾಣ ಮಾಡದೇ ಓಡಾಡಲು ತೀರಾ ಕಷ್ಟವಾಗುತ್ತಿದೆ ಎಂದು ಅಲ್ಲಿನ ನಿವಾಸಿಗಳು ಮಾನ್ಯ ಶಾಸಕರಿಗೆ ತಿಳಿಸಿದರು.

ಇಲಾಖೆಯ ಸಂಬಂಧಪಟ್ಟ ಅಧಿಕಾರಿಯನ್ನು ಮತ್ತು ಗುತ್ತಿಗೆದಾರರನ್ನು ಸ್ಥಳಕ್ಕೆ ಭೇಟಿ ನೀಡಲು ತಿಳಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಮಾನ್ಯ ಶಾಸಕರು ಭರವಸೆ ನೀಡಿದರು.

ಇದನ್ನು ಓದಿದ್ದೀರಾ…?ಕೋಲಾರ |ಆದಿಮ ನಾಟಕೋತ್ಸವ ಸಂಭ್ರಮ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುವರ್ಣ ವೆಂಕಟರಾಮಪ್ಪ, ಮಾಜಿ ಅಧ್ಯಕ್ಷರಾದ ರಾಮಬಾಬು, ಕೆಎಂ ಕೃಷ್ಣಮೂರ್ತಿ, ಮುನಿಸ್ವಾಮಿ ರೆಡ್ಡಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಜಯರಾಮ್ ರೆಡ್ಡಿ, ವೆಂಕಟರಮಪ್ಪ, ಪಿಡಿಒ ಮಂಜುನಾಥ್, ಮುಖಂಡರಾದ ಶಿವಾರೆಡ್ಡಿ, ಕೋದಡರೆಡ್ಡಿ , ಕಾಂಗ್ರೆಸ್ ಕಾರ್ಮಿಕ ವಿಭಾಗದ ಬ್ಲಾಕ್ ಅಧ್ಯಕ್ಷ ಮಧು , ಶೇಕ್ ಅಪ್ರೋಜ್, ಅನ್ಸರ್ ಪಾಷಾ, ನರೇಂದ್ರಬಾಬು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬೇತಮಂಗಲ: ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ...

ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಗ್ರಾಮ ಪಂಚಾಯ್ತಿ ಮುಂಭಾಗ ಪ್ರತಿಭಟನೆ

ಕೆ.ಜಿ.ಎಫ್:ಅಂಬೇಡ್ಕರ್ ಭವನದ ಕಟ್ಟಡವನ್ನು ನಿಮ್ಮ ಗಮನಕ್ಕೆ ಬಾರದೆ ಹೇಗೆ ಕೆಡವಲಾಯಿತ್ತು ಮತ್ತು...