ಕೊಪ್ಪಳ | ಶಿಕ್ಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು

Date:

ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ನಿರುಪಾದಿ ದುರುಗಪ್ಪ (14) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ.

IMG 20241219 WA0008

ಎರಡು ದಿನದ ಹಿಂದೆ ಪ್ರವಾಸಕ್ಕೆಂದು ಶಾಲಾ ಮಕ್ಕಳು ಹಾಗೂ ಶಿಕ್ಷಕರು ಮಲೆನಾಡು ಭಾಗಕ್ಕೆ ತೆರಳಿದ್ದರು. ಭಟ್ಕಳ ನಗರ ದಾಟಿದ ನಂತರ ಗ್ರಾಮವೊಂದರಲ್ಲಿ ಮೂತ್ರ ವಿಸರ್ಜನೆಗೆ ಬಸ್ ನಿಲ್ಲಿಸಲಾಗಿತ್ತು. ಎಲ್ಲ ಮಕ್ಕಳು ಮೂತ್ರ ವಿಸರ್ಜನೆ ಮಾಡಿ ಬಸ್ ಹತ್ತಿದ್ದರು. ನಂತರ ನಿರುಪಾದಿ ಮೆಡಿಕಲ್ ಅಂಗಡಿಗೆ ತೆರಳಿ ಮಾತ್ರೆ ತಗೆದುಕೊಂಡು ಹಿಂದಿರುಗುವಾಗ ಬಾವಿಯಲ್ಲಿ ಬಿದ್ದಿದ್ದಾನೆ ಎಂದು ವಿದ್ಯಾರ್ಥಿಯ ಅಣ್ಣ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕರು ಆ ಗ್ರಾಮದಿಂದ ಸ್ವಲ್ಪ ದೂರದಲ್ಲೇ ಹೋದಾಗ ಮಕ್ಕಳನ್ನು ಎಣಿಸಿದ್ದಾರೆ. ಒಬ್ಬ ವಿದ್ಯಾರ್ಥಿ ಕಡಿಮೆ ಇರುವ ಕಾರಣಕ್ಕೆ ಹಿಂತಿರುಗಿ ಅದೇ ಗ್ರಾಮಕ್ಕೆ ವಾಪಸಾಗಿದ್ದಾರೆ. ಅಷ್ಟರಲ್ಲಿ ಆ ಗ್ರಾಮದ ಜನ ಬಾವಿಯಲ್ಲಿ ಬಿದ್ದ ವಿದ್ಯಾರ್ಥಿಯ ಶವ ಹೊರತೆಗೆದಿದ್ದರು.

ಶಾಲೆಯ ಒಟ್ಟು 105 ಮಂದಿ ಮಕ್ಕಳು, 13 ಮಂದಿ ಶಿಕ್ಷಕರು ಒಗ್ಗೂಡಿ ನಾಲ್ಕು ದಿನದ ಪ್ರವಾಸಕ್ಕೆ ತೆರಳಿದ್ದರು. ವಿದ್ಯಾರ್ಥಿ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ...

ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆವರೆಗೆ...

ಕೊಪ್ಪಳ | ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್‌ ಧರಿಸಿಬಂದ ಮಹಿಳೆ; ಮತಗಟ್ಟೆಯಲ್ಲಿ ಗದ್ದಲ

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ...

ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ...