ಮಾಲೂರು ಕ್ಷೇತ್ರ | ಕಾಂಗ್ರೆಸ್‌ಗೆ ನಿರಾಯಾಸದ ಗೆಲುವು ಸಾಧ್ಯತೆ!

Date:

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೇಸ್‌ ಭದ್ರಕೋಟೆಯಾಗಿಸಿಕೊಂಡಿದೆ ಆ ಕೋಟೆಯನ್ನು ಭೇದಿಸಲು ಬಿಜೆಪಿ-ಜೆಡಿಎಸ್‌ ಭಾರೀ ಪ್ರಯತ್ನ ಮಾಡುತ್ತಿವೆ. ಹಾಲಿ ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರಿಗೆ ಕ್ಷೇತ್ರದಲ್ಲಿ ಭಾರೀ ಮನ್ನಣೆಯೂ ಇದೆ. ಅವರು ಜನರೊಂದಿಗೆ ಉತ್ತಮ ಬಾಂಧವ್ಯ ಹೊದಿದ್ದು, ತಮ್ಮ ಮೂರನೇ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.

ಇನ್ನು, 2018ರಲ್ಲಿ ಜೆಡಿಎಸ್‌ನಿಂದ ಸರ್ಧಿಸಿ ಸೋಲು ಕಂಡಿದ್ದ ಮಾಜಿ ಶಾಸಕ ಕೆ.ಎಸ್ ಮಂಜುನಾಥ್ ಗೌಡ, ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಜೆಡಿಎಸ್‌ ಜಿ.ಇ ರಾಮೇಗೌಡರನ್ನು ಕಣಕ್ಕಿಳಿಸಿದೆ. ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಯುವ ಮುಖಂಡ, ಮಾಜಿ ಬಿಬಿಎಂಪಿ ಸದಸ್ಯ ಹೂಡಿ ವಿಜಯಕುಮಾರ್‌ ಕೇಸರಿ ಪಡೆ ವಿರುದ್ಧ ಬಂಡಾಯವೆದ್ದಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆಯಿಂದ ಬಿಜೆಪಿ ಮತಗಳು ವಿಭಜನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಜಯ್ ಕುಮಾರ್ ಬೆಂಬಲಿಗರು ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದು, ಹಲವೆಡೆ ಸಂಸದ ಮುನಿಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋದಾಗ ಪ್ರಚಾರ ಅಡ್ಡಿ ಪಡಿಸಿರುವುದು ವರದಿಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ವಸರ್ಸ್‌f ಪಕ್ಷೇತರ ಅಭ್ಯರ್ಥಿ ಎಂಬಂತಾಗಿದೆ. ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಈ ಹಿಂದೆ ಬಿಜೆಪಿಯಿಂದ ಮಾಸ್ತಿ ಭಾಗದಲ್ಲಿ ಕೋಲಾರ ಜಿಲ್ಲಾ ಪಂಚಾಯತಿಗೆ ಆಯ್ಕೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿ, ಆ ಪಕ್ಷವನ್ನು ತೊರೆದು, ಈಗ ಜೆಡಿಎಸ್‌ನಿಂದ ಕಣಕ್ಕಿಳಿದ್ದಾರೆ. ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ನಡುವಿನ ಜಟಾಪಟಿಯಲ್ಲಿ ಕಾಂಗ್ರೆಸ್‌ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು

ಕ್ಷೇತ್ರದಲ್ಲಿ 65,000 ಎಸ್‌ಸಿ-ಎಸ್‌ಟಿ ಮತದಾರರಿದ್ದು, ಅವರೇ ನಿರ್ಣಾಯಕರಾಗಿದ್ದಾರೆ. 60,000 ಒಕ್ಕಲಿಗ, 15,000 ಮುಸ್ಲಿಮರು ಹಾಗೂ 50,000 ಇತರ ಸಮುದಾಯಗಳ ಮತದಾರರು ಕ್ಷೇತ್ರದಲ್ಲಿದ್ದಾರೆ. ಕ್ಷೇತ್ರದ ಎಲ್ಲ ಅಭ್ಯರ್ಥಿಗಳು ಒಕ್ಕಲಿಗರೇ ಆಗಿರುವುದರಿಂದ ಒಕ್ಕಲಿಗ ಮತಗಳು ಹಂಚಿಹೋಗುವ ಸಾಧ್ಯತೆಯಿದ್ದು, ದಲಿತರು, ಮುಸ್ಲಿಮರು ಮತ್ತು ಇತರ ಸಮುದಾಯಗಳ ಮತದಾರರು ಯಾರ ಕೈ ಹಿಡಿತಾರೋ ಅವರೇ ಗೆಲ್ಲುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...