ಮಂಡ್ಯ | ವಯನಾಡು ಗುಡ್ಡಕುಸಿತ: ಮೃತರಾದ ಕೆ ಆರ್ ಪೇಟೆಯ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

Date:

ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಅಗತ್ಯ ಸಹಕಾರ ನೀಡಿ ಸಮನ್ವಯ ವಹಿಸಲು ಕರ್ನಾಟಕ ಸರಕಾರದಿಂದ ಅಧಿಕಾರಿಗಳ ತಂಡ ವಯನಾಡಿಗೆ ತೆರಳಿದ್ದು, ಅವರಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ವಯನಾಡಿನಲ್ಲಿ ಒದಗಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಕರ್ನಾಟಕ ಸರಕಾರದಿಂದ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

1001191828

ಮೃತರಾದ ಲೀಲಾವತಿ ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ವಿತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು. ನಿಹಾಲ್ ಅವರು ಚಿಕ್ಕ ವಯಸ್ಸಿನ ಹುಡುಗನಾಗಿದ್ದು, ಅವರಿಗೂ ಸಹ ಸಣ್ಣ ಪ್ರಮಾಣದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಸಚಿವರು ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರದ ಮೊತ್ತ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಎನ್‌ಎಸ್‌ಎಸ್ ಮತ್ತು ಸ್ಕೌಟ್ ಮತ್ತು ಗೈಡ್ಸ್...

ಮಂಡ್ಯ | ಕೆ ಆರ್ ಪೇಟೆ: ಕೆಸರು ಗದ್ದೆಯಂತಾದ ರಸ್ತೆ; ರಾಗಿ ಪೈರು ನೆಟ್ಟ ಮಹಿಳೆಯರು!

ಅಭಿವೃದ್ಧಿ ಮಂತ್ರ ಪಠಿಸುವ ನಮ್ಮ ದೇಶದಲ್ಲಿ ಇಂದಿಗೂ ರಸ್ತೆಗಳು ಗದ್ದೆಯಂತಿರುವ ವಿಲಕ್ಷಣ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ...

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ...