ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

Date:

  • ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ
  • ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ

ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಘಟನೆಬ ಬೆಳಗಾವಿಯಲ್ಲಿ ನಡೆದಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿರ್ಧಿಷ್ಟ ನಿಲುವು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೆ, ಫಡ್ನವೀಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಅಭಯ್ ಪಾಟೀಲ್ ಮತ್ತು ರವಿ ಪಾಟೀಲ್ ಪರ ಪ್ರಚಾರಕ್ಕಾಗಿ ಫಡ್ನವೀಸ್‌ ಬೆಳಗಾವಿಗೆ ಬಂದಿದ್ದರು. ಈ ವೇಳೆ, ಎಂಇಎಸ್‌ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿದ್ದಾರೆ. ಫಡ್ನವೀಸ್‌ ಕಾರ್ಯಕ್ರಮಕ್ಕೆ ಬಿಗಿ ಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದ ಪೊಲೀಸರು, ಹಲವು ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದಿಂದ ಬರುವ ಬಿಜೆಪಿ ಮತ್ತು ಕಾಂಗ್ರೆಸ್‌ ಮುಖಂಡರಿಗೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಶಿವಸೇನ (ಯುಬಿಟಿ) ವಕ್ತಾರ ಸಂಜಯ್‌ ರಾವತ್ ಎಂಇಎಸ್‌ ಕಾರ್ಯಕರ್ತರಿಗೆ ಕರೆ ನೀಡಿದ್ದರು.

ಬೆಳಗಾವಿ ಜಿಲ್ಲೆಯಲ್ಲಿ ಐದು ಮಂದಿಯನ್ನು ಕಣಕ್ಕಿಳಿಸಿರುವ ಎಂಇಎಸ್, ಮಹಾರಾಷ್ಟ್ರದ ಪ್ರಮುಖ ರಾಜಕೀಯ ನಾಯಕರಿಗೆ ಪತ್ರ ಬರೆದು, ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೋರಿತ್ತು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸರ್ವಜನರ ಶಾಂತಿಯ ತೋಟವನ್ನು ‘ಯುಪಿ’ ಮಾದರಿ ಪ್ರಯೋಗಾಲಯ ಮಾಡಲು ಹೊರಟಂತಿದೆ

ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ಮುಖಂಡರು ತಮ್ಮದೇ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದು, ಎಂಇಎಸ್‌ ಅಭ್ಯರ್ಥಿಗಳಿಗೆ ಬೆಂಬಲ ನೀಡಿಲ್ಲ. ಎಂಇಎಸ್‌ಗೆ ಎನ್‌ಸಿಪಿ ಹಾಗೂ ಶಿವಸೇನೆ ಬೆಂಬಲ ನೀಡಿವೆ.

“ರಾಷ್ಟ್ರೀಯ ಪಕ್ಷದ ನಾಯಕನಾಗಿ ನಾನು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದೇನೆ ಎಂದ ಮಾತ್ರಕ್ಕೆ ಮರಾಠಿ ಜನರ ಹೋರಾಟವನ್ನು ನಾನು ಬೆಂಬಲಿಸುವುದಿಲ್ಲ ಎಂಬ ಅರ್ಥವಲ್ಲ” ಎಂದು ಫಡ್ನವೀಸ್ ಸಮುಜಾಯಿಷಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...