ಸಚಿವ ಸೋಮಣ್ಣಗೆ ವರುಣಾದಲ್ಲಿ ಮತ್ತೆ ಮುಖಭಂಗ

Date:

  • ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಅಭಿಮಾನಿಗಳು
  • ಐದು ದಿನಗಳ ಕಾಲ ಪ್ರಚಾರದಲ್ಲಿದ್ದ ಸೋಮಣ್ಣಗೆ ಮುಜುಗರ

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ ಸೋಮಣ್ಣ ಅವರು ಮತ್ತೆ ಮುಜುಗರಕ್ಕೆ ಈಡಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮತದಾರರು ಕ್ಷೇತ್ರದಲ್ಲಿ ಬಿಜೆಪಿ ನಾಯಕರಿಗೆ ತರಾಟೆ ತೆಗೆದುಕೊಳ್ಳುತ್ತಿದ್ದಾರೆ.

ಸೋಮಣ್ಣ ಅವರು ಐದು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರಚಾರ ಹಮ್ಮಿಕೊಂಡಿದ್ದರು. ಆದರೆ, ಪ್ರಚಾರದ ಮೊದಲ ದಿನವೇ ವರುಣಾ ಕ್ಷೇತ್ರದ ಭುಗತಗಳ್ಳಿ ಗ್ರಾಮದ ಜನರು ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿ, ಸೋಮಣ್ಣ ಅವರಿಗೆ ಘೆರಾವ್‌ ಹಾಕಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದ ಸೋಮಣ್ಣ ಭಾಷಣ ಮಾಡಲು ಮುಂದಾಗುತ್ತಿದ್ದಂತೆಯೇ ಯುವಕನೋರ್ವ ಪ್ರಶ್ನೆ ಕೇಳಲು ಪ್ರಾರಂಭಿಸಿದ. ಕಾರ್ಯಕ್ರಮ ಮುಗಿದ ಬಳಿಕ ಮಾತನಾಡುವೆ ಎಂದು ಸೋಮಣ್ಣ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಭಾಷಣ ಮುಗಿಯುತ್ತಿದ್ದಂತೆಯೇ ಸೊಮಣ್ಣ ಅವರನ್ನು ಎದುರಾದ ಗ್ರಾಮಸ್ಥರು ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ್ದಾರೆ. ಮತ್ತೊಂದೆಡೆ ಸೋಮಣ್ಣ ಪರವಾಗಿ ಕೆಲವು ಯುವಕರು ಘೋಷಣೆ ಕೂಗಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ -1: ಕರ್ನಾಟಕದಲ್ಲಿ ಸ್ಪಷ್ಟ ಆಡಳಿತ ವಿರೋಧಿ ಅಲೆ ಇದೆ

ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು, ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ಕೊಡುವಂತೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಆಗ್ರಹಿಸಿದರು. ಆದರೆ, ಪೊಲೀಸರ ಮಧ್ಯೆ ಪ್ರವೇಶದೊಂದಿಗೆ ಸೋಮಣ್ಣ ಅವರು ಮತ್ತೊಂದು ಗ್ರಾಮಕ್ಕೆ ತೆರಳಿದರು.

ಮೂರನೇ ಬಾರಿ ಪ್ರಚಾರ

ಸೋಮಣ್ಣ ಅವರಿಗೆ ಕ್ಷೇತ್ರದ ಜನರು ತರಾಟೆ ತೆಗೆದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಏಪ್ರಿಲ್ 18ರಂದು ಲಲಿತಾದ್ರಿಪುರದ ಗ್ರಾಮದ ಜನರು ಸೋಮಣ್ಣ ಅವರಿಗೆ ಅಭಿವೃದ್ಧಿ ಕುರಿತು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.

ಇದಾದ ಬಳಿಕ ಸೋಮಣ್ಣ ಪರ ಪ್ರಚಾರಕ್ಕೆ ತೆರಳಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೂ ಯುವಕರು ತರಾಟೆಗೆ ತೆಗೆದುಕೊಂಡಿದ್ದರು. ಪ್ರತಾಪ್ ಸಿಂಹರನ್ನು ಯುವಕರು ಪ್ರಶ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...