ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

Date:

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ.

ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ ಬಳಿಕ ಮೊಟ್ಟಮೊದಲ ಬಾರಿಗೆ ಈ ದಾಖಲೆ ನಿರ್ಮಾಣವಾಗಿದೆ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ಕಾಯ್ದುಕೊಂಡಿದೆ. ಈಗಲೂ ಜಲಾಶಯ ಭರ್ತಿಯಾಗಿರುವ ಕಾರಣ ಈ ಬೇಸಿಗೆಯಲ್ಲಿ ಕಾವೇರಿ ಕೊಳ್ಳದ ಅನ್ನದಾತರು, ವಿಶೇಷವಾಗಿ ಬೆಂಗಳೂರಿಗರಿಗರಿಗೆ ನೀರಿನ ಅಭಾವ ಸೃಷ್ಟಿಯಾಗಲಾರದು. ಈ ಮೂಲಕ ಸರ್ಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಸರ್ಕಾರ ಮಂಗಳವಾರ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಬೇಸಿಗೆ ಬೆಳೆ ಬೆಳೆಯಲು ರೈತರಿಗೆ ನೀರೊದಗಿಸುವ ನಿರ್ಧಾರ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಎರಡು ವರ್ಷಗಳ ಮಳೆ ಅಭಾವದಿಂದಾಗಿ ತೀವ್ರ ಬರಗಾಲ ಸೃಷ್ಟಿಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಕಾವೇರಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿದೆ. ಇದರಿಂದ ಕನ್ನಂಬಾಡಿ ಅಣೆಕಟ್ಟು ಕೂಡ ಭರ್ತಿಯಾಗಿದೆ. ಪ್ರಸಕ್ತ ವರ್ಷ ತಮಿಳುನಾಡಿಗೆ ಬಿಡಬೇಕಾದ ನೀರಿಗಿಂತ ಹೆಚ್ಚಿನ ಪ್ರಮಾಣದ ನೀರು ಹರಿದಿದೆ. ಹೀಗಾಗಿ ಈ ಬಾರಿ ಕಾವೇರಿ ಸಮಸ್ಯೆ ಕೂಡ ಇಲ್ಲ, ನೀರಿನ ಅಭಾವ ಕೂಡ ಇಲ್ಲ.

ಜೂನ್‌ 29ರಂದು ಕೂಡ ಜಲಾಶಯದ ನೀರಿನ ಮಟ್ಟವು 90 ಅಡಿಯಿತ್ತು. ನಂತರ ಕೊಡಗು ಮತ್ತು ವಯನಾಡು ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜಲಾಶಯಕ್ಕೆ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಪರಿಣಾಮ ಜುಲೈ 11ರಂದೇ ಜಲಾಶಯದ ನೀರಿನ ಮಟ್ಟವು 124 ಅಡಿ ದಾಟಿದರೂ ಜುಲೈ. 25ರಂದು ಸಂಪೂರ್ಣ ಭರ್ತಿ ಮಾಡಿಸಲಾಗಿತ್ತು. 2009 ರಲ್ಲಿ 146 ದಿನ, 2022ರಲ್ಲಿ 114 ದಿನ ಡ್ಯಾಂ ಸಂಪೂರ್ಣ ಭರ್ತಿಯಾಗಿತ್ತು.

ಜಲಾಶಯದಲ್ಲಿ 124.30 ಅಡಿವರೆಗೆ ನೀರಿದ್ದು, 48.754 ಟಿಎಂಸಿ ಅಡಿ ನೀರು ಸಂಗ್ರಹಣೆಯಾಗಿದೆ. ಗರಿಷ್ಠ 124.80 ಅಡಿ ಎತ್ತರವುಳ್ಳ ಕನ್ನಂಬಾಡಿ ಕಟ್ಟೆಯು ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...