ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

Date:

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. “ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,” ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವದಲ್ಲಿ ಸಚಿವ ಎಂಸಿ ಸುಧಾಕರ್ ಮಾತನಾಡಿ, “ಉನ್ನತ ಶಿಕ್ಷಣದಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ನಾವು ಸೆಂಟರ್ ಫಾರ್ ರಿಸರ್ಚ್ ಇನ್ ಸ್ಕೀಮ್ಸ್‌ ಆಂಡ್ ಪ್ರೋಗ್ರಾಮ್ಸ್ (CRISP) ಜೊತೆ ಕೈಜೋಡಿಸುತ್ತಿದ್ದೇವೆ,” ಎಂದು ಮಾಹಿತಿ ನೀಡಿದ್ದಾರೆ. CRISP ಭಾರತ ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಕೆಲಸ ಮಾಡಿದ ನಾಗರಿಕ ಸೇವಕರ ಗುಂಪಿನ ಉಪಕ್ರಮವಾಗಿದೆ.

“ನಾವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ವೃತ್ತಿಪರವಲ್ಲದ ಕಾಲೇಜುಗಳನ್ನು ವೃತ್ತಿಪರ ಕಾಲೇಜುಗಳಾಗಿ ಪರಿವರ್ತಿಸುವ ಚಿಂತನೆಯಿದೆ. ಹಾಗೆಯೇ 11,000 ರೂಪಾಯಿಯಿಂದ 17,000 ರೂಪಾಯಿ ಸ್ಟೈಫಂಡ್‌ನೊಂದಿಗೆ ನಾವು ಎರಡು ವರ್ಷಗಳ ಪದವಿ ಹೊಂದಿರುವವರಿಗೆ ಅಪ್ರೆಂಟಿಸ್‌ಶಿಪ್ ಎಂಬೆಡೆಡ್ ಡಿಗ್ರಿ ಪೋಗ್ರಾಮ್ ಮತ್ತು ಒಂದು ವರ್ಷ ಪದವಿಗೆ ಇಂಟರ್ನ್‌ಶಿಪ್ ಆರಂಭಿಸುವ ಯೋಜನೆ ಹೊಂದಿದ್ದೇವೆ,” ಎಂದು ಸಚಿವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಮೇಶ್ ವಾಧ್ವಾನಿ ಫೌಂಡೇಶನ್ ಜೊತೆಗೆ ರಾಜ್ಯ ಸರ್ಕಾರವು ಕೌಶಲ್ಯ ಮತ್ತು ಉದ್ಯೋಗ-ಆಧಾರಿತ ವೃತ್ತಿಪರ ಕೋರ್ಸ್‌ಗಳನ್ನು ಆರಂಭಿಸಲು ಒಪ್ಪಂದವನ್ನು ಮಾಡಿಕೊಂಡಿದೆ. ಸರ್ಕಾರಿ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗಾಗಿ ಸ್ಪೋಕನ್ ಇಂಗ್ಲಿಷ್ ಕೋರ್ಸ್‌ಗಳಂತಹ ತರಬೇತಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದರು.

ಇನ್ನು ಆರಂಭದಲ್ಲಿ ಬೆಂಗಳೂರಿನ ಆರ್‌ಸಿ ಕಾಲೇಜಿನಲ್ಲಿ ಈ ವೃತ್ತಿಪರ ಶಿಕ್ಷಣ ಆರಂಭಿಸಲಾಗುತ್ತದೆ. ಅದಾದ ಬಳಿಕ ಮೈಸೂರು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಇತರೆ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತದೆ.

ಯುವಕರಿಗೆ ಉದ್ಯೋಗವಕಾಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರಸ್ತಕ್ತ ಉನ್ನತ ಶಿಕ್ಷಣದಲ್ಲಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದೆ. ವಿದೇಶಿ ವಿಶ್ವವಿದ್ಯಾನಿಲಯಗಳು ಮತ್ತು ಸ್ಥಳೀಯ ವಿಶ್ವವಿದ್ಯಾನಿಲಯಗಳೊಂದಿಗೆ ಒಪ್ಪಂದವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...