ಚುನಾವಣೆ 2023 | ಶಿವಾಜಿನಗರ ಜೆಡಿಎಸ್‌ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

Date:

  • ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಯಿಂದ ನಾಮಪತ್ರ
  • ಮೂರು ಗಂಟೆ ತಡವಾಗಿ ನಾಮಪತ್ರ ಸಲ್ಲಿಸಿದ ಮತ್ತೋರ್ವ ಅಭ್ಯರ್ಥಿ

ಬೆಂಗಳೂರಿನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ‌ಅಬ್ದುಲ್ ಜಫರ್ ಅಲಿ ಮತ್ತು ಮಂಜುನಾತ್‌ ಅವರ ನಾಮಪತ್ರಗಳು ತಿರಸ್ಕೃತವಾಗಿವೆ.

ಕೆಲವು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಜಫರ್ ಅಲಿ, ಇತ್ತಿಚಿಗಷ್ಟೇ ಬೆಂಗಳೂರಿಗೆ ಹಿಂತಿರುಗಿದ್ದರು. ಇವರ ಹೆಸರು ಯಾವ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇಲ್ಲ. ಆದ್ದರಿಂದ ಚುನಾವಣಾ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ. ಈ ಬಗ್ಗೆ ಶಿವಾಜಿನಗರ ಆರ್‌ ಓ ಬಸವರಾಜ್ ಸೋಮಣ್ಣನವರ್ ದೃಢಪಡಿಸಿದ್ದಾರೆ.

ಜಫರ್ ಅಲಿ ಅವರು ಏ. 20 ರಂದು ಮತದಾರರ ಗುರುತಿನ ಚೀಟಿಗೆ ತಮ್ಮ ಹೆಸರನ್ನು ಸೇರಿಸಲು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಸಲ್ಲಿಸಲು ವಿಳಂಬವಾಗಿದ್ದರಿಂದ ಜಫರ್ ಅಲಿ ಹೆಸರು ಸೇರ್ಪಡೆಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಸಾವಿರ ಪೌರ ಕಾರ್ಮಿಕರ ಕಾಯಂ; ಸುರ್ಜೇವಾಲ ಭರವಸೆ

ಇದರ ಬಗ್ಗೆ ಅರಿವು ಹೊಂದಿದ್ದ ಜೆಡಿಎಸ್ ಮುಂಜಾಗ್ರತ ಕ್ರಮವಾಗಿ ಆರ್ ಮಂಜುನಾಥ್ ಎಂಬವವರನ್ನು ಕೂಡ ಕಣಕ್ಕೆ ಇಳಿಸಿತ್ತು. ಆದರೆ, ಮಂಜುನಾಥ್‌ ಅವರು ನಾಮಪತ್ರವನ್ನು 3 ಗಂಟೆ ತಡವಾಗಿ ಸಲ್ಲಿಸಿಕೆ ಮಾಡಿದ್ದರಿಂದ ಮಂಜುನಾಥ್ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ. ಹೀಗೆ ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗದ ಕಾರಣ ಜೆಡಿಎಸ್‌ಗೆ ಮುಖಭಂಗ ಉಂಟಾಗಿದೆ.

ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ದಲಿತ ಅಭ್ಯರ್ಥಿ ಎನ್ ಚಂದ್ರ ಅವರನ್ನು ಕಣಕ್ಕಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...