ರಾಯಭಾರಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಅನಿವಾಸಿ ಕನ್ನಡಿಗರ ಒತ್ತಾಯ

Date:

  • ಹೈಕೋರ್ಟ್ ಮೊರೆ ಹೋದ ಅನಿವಾಸಿ ಕನ್ನಡಿಗರು
  • ರಾಯಭಾರಿ ಕಚೇರಿಗಳಿಗೆ ಪತ್ರ ಬರೆಯುವ ಅಭಿಯಾನ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ ಎಂಟು ದಿನಗಳ ಮಾತ್ರ ಬಾಕಿ ಉಳಿದಿದೆ. 80ರ ಮೇಲ್ಪಟ್ಟ ವೃದ್ದರು, ವಿಶೇಷ ಚೇತನರು, ಪತ್ರಕರ್ತರಿಗೆ ಚುನಾವಣಾ ಆಯೋಗ ಬ್ಯಾಲೇಟ್‌ ಪೇಪರ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ, ಸುಮಾರು 5 ಲಕ್ಷ ಅನಿವಾಸಿ ಕನ್ನಡಿಗರ ಈ ಸೇವೆಯಿಂದ ವಂಚಿತರಾಗಿದ್ದಾರೆ.

ತಾವಿದ್ದ ಸ್ಥಳದಿಂದ ಮತ ಚಲಾಯಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿ ಕೊಡದ ಕಾರಣ ,5 ಲಕ್ಷ ಮಂದಿ ಅನಿವಾಸಿ ಕನ್ನಡಿಗರು ಮತ ಚಲಾಯಿಸಲು ತಮ್ಮ ತಮ್ಮ ಊರಿಗೆ ಬರಬೇಕಾಗಿದೆ.

ಈ ಹಿಂದೆ ಇಟಲಿ, ಇಂಗ್ಲೆಂಡ್, ಸೌದಿ ಅರೇಬಿಯಾ, ಯುಎಇ ಮತ್ತು ಇತರೆ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಮತಗಟ್ಟೆಗಳನ್ನು ಕೋರಿ ತಮ್ಮ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿದ್ದರು. ಆದರೆ, ಸರಿಯಾದ ಸ್ಪಂದನೆ ದೊರೆಯದ ಕಾರಣ ಅನಿವಾಸಿ ಕನ್ನಡಿಗರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಮಂಗಳವಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಗರೋತ್ತರ ಕನ್ನಡಿಗರು ಒಂದು ಸಂಘ ಮಾಡಿಕೊಂಡಿದ್ದು, ಇಂಗ್ಲೆಂಡ್‌ನಲ್ಲಿ ಅದನ್ನು ನೋಂದಾಯಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

“ನಾವು ಮತದಾನ ಮಾಡಲು ಭಾರತಕ್ಕೆ ಬರಬೇಕಾದರೆ ಹೆಚ್ಚು ವೆಚ್ಚ ತಗುಲುತ್ತದೆ. ಚುನಾವಣಾ ಆಯೋಗವಾಗಲಿ ಸರ್ಕಾರವಾಗಲಿ ನಮ್ಮ ಮತದಾನಕ್ಕೆ ಪ್ರೋತ್ಸಹಿಸುವುದಿಲ್ಲ” ಎಂದು ಸಾಗರೋತ್ತರ ಕನ್ನಡಿಗರ ಜಂಟಿ ಕಾರ್ಯದರ್ಶಿ ಹೇಳಿರುವುದಾಗಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

“ನಮೂನೆ-6ಎನಲ್ಲಿ ನಮ್ಮ ಹೆಸರನ್ನು ಸಾಗರೋತ್ತರ ಕನ್ನಡಿಗ ಎಂದು ನೋಂದಾಯಿಸಲು ಅವಕಾಶವಿದ್ದರೂ, ನಾವು ಕೆಲಸ ಮಾಡುವ ದೇಶಗಳಲ್ಲಿ ಅಂಚೆ ಮತದಾನ ಅಥವಾ ಬೂತ್ ಅನ್ನು ಒದಗಿಸುವುದಿಲ್ಲ. ಹೀಗಾಗಿ ನಾವು ಹೈಕೋರ್ಟ್‌ ಮೊರೆ ಹೋಗಿದ್ದೇವೆ” ಎಂದು ತಿಳಿಸಿದ್ದಾರೆ.

ದುಬೈನಿಂದ ಬಾಗಲಕೋಟೆಯ ಬನಹಟ್ಟಿಗೆ ಬಂದಿರುವ ಸಂಘದ ಅಧ್ಯಕ್ಷ ಚಂದ್ರಶೇಖರ ಲಿಂಗದಳ್ಳಿ, ಅನಿವಾಸಿ ಕನ್ನಡಿಗರು ತಮ್ಮ ತಮ್ಮ ರಾಯಭಾರಿ ಕಚೇರಿಗಳಿಗೆ ಮನವಿ ಪತ್ರ ಸಲ್ಲಿಸುವ ಅಭಿಯಾನ ಆರಂಭಿಸಿದ್ದಾರೆ.

“ಅನಿವಾಸಿ ಕನ್ನಡಿಗರಲ್ಲಿ ಮೂರು ವಿಧವಿದೆ. ಕೆಲಸ ಮಾಡುವವರು, ಅವಲಂಭಿತರು ಹಾಗೂ ವಿದ್ಯಾರ್ಥಿಗಳು. ಅಲ್ಜೀರಿಯಾ, ಫಿಲಿಪೈನ್ಸ್, ಇಟಲಿ ಮತ್ತು ರೊಮೇನಿಯಾದಂತಹ ದೇಶಗಳು ತಮ್ಮ ರಾಯಭಾರಿ ಕಚೇರಿಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿವೆ. ಹೀಗಿರುವಾಗ ಸುಮಾರು 60 ಲಕ್ಷ ಅನಿವಾಸಿ ಭಾರತೀಯರಿಗೆ ಏಕೆ ಸಾಧ್ಯವಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...