ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರಹಾಕಲಾಗುತ್ತಿದೆ: ಜಗದೀಶ್‌ ಶೆಟ್ಟರ್‌

Date:

  • ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದೆ
  • ʼನನ್ನ ಶ್ರಮ ಅರ್ಥ ಮಾಡಿಕೊಳ್ಳದ ನಾಯಕರು ನನ್ನನ್ನು ಹೊರದಬ್ಬಿದ್ದಾರೆʼ

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದೇನೆ. ಆದರೆ, ಇದನ್ನೆಲ್ಲ ಅರ್ಥಮಾಡಿಕೊಳ್ಳದೇ ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ. ಈಗ ನನ್ನ ಮನೆಯಿಂದಲೇ ನನ್ನ ಹೊರದಬ್ಬಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬೇಸರ ವ್ಯಕ್ತಪಡಿಸಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

“ನಾನು ದೊಡ್ಡ ಹುದ್ದೆಯ ಆಕಾಂಕ್ಷಿಯಾಗಿರಲಿಲ್ಲ. ವಯಸ್ಸಿದೆ, ಅನಾರೋಗ್ಯವಿಲ್ಲ, ಸಿಡಿ ವಿಚಾರ ಇಲ್ಲ. 30 ವರ್ಷದಿಂದ ಪಕ್ಷ ಕಟ್ಟಿದ್ದೇನೆ. ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಿದ್ದೇನೆ. ನನಗೆ ಶಾಸಕನಾಗಿ ಕೆಲಸ ಮಾಡೋ ಅವಕಾಶ ಕೊಟ್ಟರೆ ಸಾಕಿತ್ತು. ಆದರೆ ಯಾವುದೇ ಮುನ್ಸೂಚನೆ ಇಲ್ಲದೇ ಈ ರೀತಿ ಮಾಡಿರೋದು ಬೇಸರ ತಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವ ಮಿಸ್ಟೇಕ್ಸ್ ಇದೆ ಅಂತ ನನ್ನ ಟಿಕೆಟ್‌ ತಪ್ಪಿಸಿದ್ದಾರೆ? ಈ ಬಗ್ಗೆ ರಾಜ್ಯ ನಾಯಕರು, ಪಕ್ಷದ ವರಿಷ್ಠರು ಸ್ಪಷ್ಟನೆ ನೀಡಲೇ ಇಲ್ಲ. ಬಿ ಎಸ್ ಯಡಿಯೂರಪ್ಪ ನನ್ನ ಪರವಾಗಿ ಮಾತನಾಡಿದ್ದರು. ಆದರೆ ಈಗ  ಮೇಲಿನ ನಾಯಕರ ಕಾರಣದಿಂದ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಯಾಕೆ ಈ ಹಿಂದೆ ಕೆಜೆಪಿ ಸೇರಿದ್ದರು? ಅವರು ಉತ್ತರಿಸಲಿ” ಎಂದರು.

ಕೊನೆ ಸಂಧಾನಕ್ಕೂ ಬಗ್ಗದ ಶೆಟ್ಟರ್‌

ಜಗದೀಶ್‌ ಶೆಟ್ಟರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಬಂದ ವೇಳೆ ಕಾಗೇರಿ ಅವರು ಸಂಧಾನಕ್ಕೆ ಮುಂದಾದರು.

ತಮ್ಮ ಖಾಸಗಿ ಕೊಠಡಿಕಗೆ ಜಗದೀಶ್‌ ಶೆಟ್ಟರ್‌ ಅವರನ್ನು ಕರೆದುಕೊಂಡು ಹೋಗಿ ಒಂದು ಗಂಟೆ ಕಾಲ ಚರ್ಚಿಸಿದರು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಗೇರಿ ಅವರಿಗೆ ಕಾಲ್‌ ಮಾಡಿ ಶೆಟ್ಟರ್‌ ಅವರ ಮನವೊಲಿಸಲು ಪ್ರಯತ್ನಪಟ್ಟರು ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ, ಯಾವ ಸಂಧಾನಕ್ಕೂ ಬಗ್ಗದ ಶೆಟ್ಟರ್‌ ಕೊನೆಗೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ ಅವರ ಕಚೇರಿಯಿಂದ ಹೊರ ನಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...