ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು, ರಾಜ್ಯದ ಮತದಾರರು ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಗೆಲುವನ್ನು ಉಡುಗೊರೆಯಾಗಿ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ ಆಗಿದೆ.

ಚುನಾವಣೆಗೂ ಮುನ್ನ ಮುಸ್ಲಿಂ ಸಮುದಾಯದ ಶೇ. 4ರಷ್ಟು ಮೀಸಲಾತಿ ಪ್ರಮಾಣ ರದ್ದು ಮಾಡಿ, ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸಮವಾಗಿ ಶೇ.2ರಷ್ಟು ಮೀಸಲಾತಿ ಹೆಚ್ಚಿಸಿ ಮತ ಬ್ಯಾಂಕ್‌ ಸೆಳೆಯಲು ಬಿಜೆಪಿ ಮುಂದಾಗಿತ್ತು. ಆದರೆ, ಪಂಚಮಸಾಲಿ ಸಮುದಾಯ ಬಿಜೆಪಿಯ ಕೊನೆ ಕ್ಷಣದ ನಾಟಕವನ್ನು ಅರ್ಥ ಮಾಡಿಕೊಂಡು, ಏನು ಮಾಡಬೇಕು ಅದನ್ನೇ ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದಿಂದ ಸುಮಾರು 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೂರು ಪಕ್ಷಗಳಿಂದ ಕಣದಲ್ಲಿದ್ದರು. ಮೀಸಲಾತಿಯ ಲಾಭದ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಪಂಚಮಸಾಲಿ ಸಮುದಾಯದ ಕೇವಲ 9 ಅಭ್ಯರ್ಥಿಗಳನ್ನು, ಕಾಂಗ್ರೆಸ್‌ನ 28 ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಗೂ ಜೆಡಿಎಸ್‌ನ ಒಬ್ಬರನ್ನು ಗೆಲ್ಲಿಸುವ ಮೂಲಕ, ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಮೂಲಕ ತಮ್ಮ ಆದ್ಯತೆಗಳು ಬೇರೆಯೇ ಇವೆ ಎಂಬುದನ್ನು ಪಂಚಮಸಾಲಿ ಸಮುದಾಯ ನೇರವಾಗಿ ಬಿಜೆಪಿಗೆ ಉತ್ತರಿಸಿದೆ. ಅಂತಿಮವಾಗಿ ಬಿಜೆಪಿ ಪಕ್ಷ ಮುಖ್ಯ ಅಲ್ಲ, ಲಿಂಗಾಯತರು ಬಿಜೆಪಿಯ ಕಾಲಾಳುಗಳಲ್ಲ ಎಂಬುದನ್ನು ಸಾರಿ ಹೇಳಿದೆ.

ಮೀಸಲಾತಿ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ಸುದೀರ್ಘವಾಗಿ ಹೋರಾಟ ಮಾಡಿಕೊಂಡು ಬಂದ ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದರು. ಆದರೆ, ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯ ಮೀಸಲಾತಿಗಿಂತಲೂ ತಮ್ಮ ಆದ್ಯತೆಗಳು ಬೇರೆ ಇವೆ ಎಂಬುದನ್ನು ಮನಗಂಡು, ಹೊಸ ಅವಕಾಶವೊಂದನ್ನು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಈ ಸಮುದಾಯ ನೀಡಿದಂತೆ ಕಾಣುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ತಾವು ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಕೊನೆಗೂ ಬಿಜೆಪಿಯೇ ಬಲಿಯಾಗಿದೆ.

ಅರವಿಂದ್‌ ಬೆಲ್ಲದ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಸಿದ್ದು ಸವದಿ ಪ್ರಮುಖವಾಗಿ ಬಿಜೆಪಿಯಿಂದ ಗೆದ್ದಿದ್ದು, ಇವರು ಸಾಮಾನ್ಯವಾಗಿ ಗೆಲ್ಲುವ ಮುಖಗಳೇ ಆಗಿವೆ. ಇನ್ನು ಕಾಂಗ್ರೆಸ್‌ನಲ್ಲಿ ಕೂಡಲಸಂಗಮ ಸ್ವಾಮೀಜಿಯ ನಿಲುವನ್ನು ವಿರೋಧಿಸಿ ಹೊರಬಂದಿದ್ದ ಹುನಗುಂದ ಕ್ಷೇತ್ರದ ಅಭ್ಯರ್ಥಿ ವಿಜಯಾನಂದ ಕಾಶಪ್ಪನವರ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ಗೆಲುವು ಕಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...