ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

Date:

  • ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ
  • ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ್ದ ಕಾಂಗ್ರೆಸ್ ಅಧ್ಯಕ್ಷ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು “ಮೋದಿ ವಿಷದ ಹಾವಿದ್ದಂತೆ. ನೆಕ್ಕಿ ನೋಡಿದವರ ಸತ್ತೇ ಹೋಗುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಖರ್ಗೆ ಅವರ ಈ ಹೇಳಿಕೆ ರಾಜ್ಯಾದ್ಯಂತ ಚರ್ಚೆಗೀಡಾಗಿದೆ. ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಿಜೆಪಿ ಹಬ್ಬಿಸುತ್ತಿರುವ ಅರ್ಥದಲ್ಲಿ ನಾನು ಹೇಳಿಲ್ಲ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಟೀಕೆಗಳ ಸುರಿಮಳೆಯ ಜೊತೆಗೆ ಬಿಜೆಪಿ, ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೆ ಪತ್ರ ಬರೆದು ದೂರು ನೀಡಿದೆ.siddaramaih 5 1 scaled

“ಮಲ್ಲಿಕಾರ್ಜುನ ಖರ್ಗೆ ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎನ್ನುವುದು ಅವರಿಗೆ ಗೊತ್ತಿದೆ. ಈ ನಡುವೆ ಅವರು ಪ್ರಧಾನಿ ಅವರನ್ನು ವಿಷದ ಹಾವಿಗೆ ಹೋಲಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದೆ.

“ಮೋದಿ ಅವರ ವಿರುದ್ಧ ವೈಯಕ್ತಿಕ ದಾಳಿ ಮತ್ತು ಚಾರಿತ್ರ್ಯವಧೆ ಮಾಡುವ ಉದ್ದೇಶದಿಂದ ಹೇಳಿಕೆ ಹೊರಬಂದಿದೆ. ಈ ಅಂಶವು ಕಾಂಗ್ರೆಸ್ ನಾಯಕರಿಗೆ ಈ ನೆಲದ ಕಾನೂನಿನ ಬಗ್ಗೆ ಗೌರವವಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಶೆಟ್ಟರ್-ಸವದಿ ಜೋಡಿ ಹಣಿಯುವ ಹೊಣೆ ಬಿಎಸ್‌ವೈ ಹೆಗಲಿಗೆ; ಫಲ ನೀಡಬಹುದೇ ಬಿಜೆಪಿ ತಂತ್ರ?

“ನರೇಂದ್ರ ಮೋದಿ ಅವರ ಮೇಲೆ ಖರ್ಗೆ ಅವರು ವೈಯಕ್ತಿಕ ದಾಳಿ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಗುಜರಾತ್ ಚುನಾವಣೆಯ ಪ್ರಚಾರದಲ್ಲಿ ಖರ್ಗೆಯವರು ಮೋದಿಯನ್ನು 100 ತಲೆ ರಾವಣ ಎಂದು ಕರೆದಿದ್ದರು” ಎಂದು ಹೇಳಿದೆ.

“ಖರ್ಗೆ ಅವರ ಹೇಳಿಕೆಯಿಂದ ಇಡೀ ರಾಷ್ಟ್ರವೇ ತಲೆತಗ್ಗಿವಂತದ್ದು. ಖರ್ಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿತ್ತು. ಆದ್ದರಿಂದ ನೀವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಯೋಗದ ಆಯುಕ್ತರಿಗೆ ಬಿಜೆಪಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...