‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’: ಅವಿಭಕ್ತ ಕುಟುಂಬಗಳು ಹಿಂದೂಗಳಲ್ಲವೇ ಎಂದು ಪ್ರತಾಪ್ ಸಿಂಹಗೆ ಕುಟುಕಿದ ಕಾಂಗ್ರೆಸ್‌

Date:

ಟ್ವಿಟರ್‌ ಬಳಕೆದಾರರೊಬ್ಬರಿಗೆ ‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’ ಎಂದು ಕೇಳುವ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪ್ರತಾಪ್‌ ಸಿಂಹ ಅವರ ಟ್ವೀಟ್‌ವೊಂದಕ್ಕೆ ಮೋಹನ್ ಎಂಬುವವರು, “ನಮ್ಮ ಮನೆಯಲ್ಲಿ 17 ಮತಗಳಿವೆ ಅವೆಲ್ಲವೂ ಸಿದ್ದರಾಮಣ್ಣಂಗೆ ಹಾಕುತ್ತೇವೆ ಪ್ರತಾಪಣ್ಣ” ಎಂದು ಕಾಮೆಂಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಂಸದ ಪ್ರತಾಪ್ ಸಿಂಹ, “17 ಮತಗಳು? ಅಣ್ತಮ್ಮ ನಿನ್ನ ಹೆಸರು ಮೋಹನ್ನಾ ಅಥವಾ ಮಹಮ್ಮದ್ದಾ” ಎಂದು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓರ್ವ ಸಂಸದನಾಗಿ ತನ್ನ ಸ್ಥಾನದ ಘನತೆ ಮೆರೆಯಬೇಕಾಗಿದ್ದನ್ನು ಬಿಟ್ಟು ಕ್ಷುಲ್ಲಕವಾಗಿ ಮಾತನಾಡಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಸದಾ ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಬಿಜೆಪಿ ನಾಯಕನ ಪ್ರಶ್ನೆಗೆ ನೆಟ್ಟಿಗರೇ ಉತ್ತರ ಕೊಟ್ಟಿರುವುದು ಸುದ್ದಿ ಆಗಿದೆ.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್‌ಗೆ ಅವಮಾನ ಮಾಡಿದ ಬಿಜೆಪಿ ಅಭ್ಯರ್ಥಿ, ಶಾಸಕ ರಘು

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಪ್ರತಾಪ್ ಸಿಂಹ ಅವರೇ, ನಿಮಗೆ ಅರ್ಹತೆ ಇದೆಯೋ ಇಲ್ಲವೋ ಅಂತೂ ನೀವು ಸಂಸದರಾಗಿದ್ದೀರಿ. ಕಡೇ ಪಕ್ಷ ಆ ಜವಾಬ್ದಾರಿ ಅರಿತು ಮಾತನಾಡಿ” ಎಂದು ಕುಟುಕಿದೆ.

“ಮಾತೆತ್ತಿದರೆ ಸಂಸ್ಕೃತಿ ಸಂಸ್ಕಾರದ ಪಾಠ ಮಾಡುವ ನಿಮಗೆ ಹಿಂದೂ ‘ಅವಿಭಕ್ತ’ ಕುಟುಂಬಗಳ ಪರಿಚಯ ಇಲ್ಲದಿರುವುದು ಆಶ್ಚರ್ಯವೇ ಸರಿ. ಅವಿಭಕ್ತ ಕುಟುಂಬಗಳು ನಿಮ್ಮ ಪ್ರಕಾರ ಹಿಂದೂಗಳಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮುಸ್ಲಿಮರಷ್ಟೇ ಹೆಚ್ಚು ಮಕ್ಕಳನ್ನು ಹೊಂದಿರುತ್ತಾರೆ ಎನ್ನುವ ಅರ್ಥದ ಪ್ರತಾಪ್ ಸಿಂಹ ಅವರ ಕಾಮೆಂಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...