ಚುನಾವಣೆ 2023 | ಅವಧಿ ಇದ್ದರೂ ಬಿಜೆಪಿ ತೊರೆಯುತ್ತಿರುವ ಸಾಲು ಸಾಲು ಎಂಎಲ್‌ಸಿಗಳು

Date:

  • ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ
  • ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಬಲ 40ರಿಂದ 34ಕ್ಕೆ ಕುಸಿಯುವ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿ ಮಂಗಳವಾರ ರಾತ್ರಿ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್‌ ವಂಚಿತರ ಬಂಡಾಯ ಭುಗಿಲೆದ್ದಿದೆ.

ಬಿಜೆಪಿ ಹೈಕಮಾಂಡ್​ ಗುಜರಾತ್‌ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಮೊದಲ ಪಟ್ಟಿಯಲ್ಲಿ ಬರೋಬ್ಬರಿ 52 ಹೊಸ ಮುಖಗಳಿಗೆ ಮಣೆ ಹಾಕಿದೆ. ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ.

ಇದರಿಂದ ಅಸಮಾಧಾನಗೊಂಡಿರುವ ಬಿಜೆಪಿ ನಾಯಕರು ಸರತಿ ಸಾಲಾಗಿ ಬಂಡಾಯ ಎದ್ದಿದ್ದಾರೆ. ಅದರಲ್ಲೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ತಮ್ಮ ಅವಧಿ ಇದ್ದರೂ ರಾಜೀನಾಮೆ ಪರ್ವಕ್ಕೆ ಮುನ್ನುಡಿ ಬರೆದಿದ್ದಾರೆ. ಇದರಿಂದಾಗಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ದೊಡ್ಡ ಮಟ್ಟದ ಹೊಡೆತ ಕೊಟ್ಟಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ನಡೆಗೆ ಮುನಿಸಿಕೊಂಡು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯ ಕೆಲ ನಾಯಕರು ರಾಜೀನಾಮೆ ನೀಡಿ ಒಬ್ಬೊಬ್ಬರಾಗಿ ಈಗ ಹೊರಬರುತ್ತಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಅಥಣಿ ಟಿಕೆಟ್‌ ವಂಚಿತರಾಗಿದ್ದು, ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ. ಅಥಣಿ ಕ್ಷೇತ್ರಕ್ಕೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಠ ಹಿಡಿದು ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದಿಂದ ಶಾಸಕ ಅರುಣ್ ಕುಮಾರ್​ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಅಸಮಾಧಾನಗೊಂಡಿರುವ ಎಂಎಲ್‌ಸಿ ಆರ್‌ ಶಂಕರ್‌, ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

ಈಗಾಗಲೇ ಬಿಜೆಪಿ ವಿಧಾನ ಪರಿಸತ್ ಸದಸ್ಯರಾಗಿದ್ದ ಪುಟ್ಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹಾಗೆಯೇ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಅಲ್ಲದೇ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಕೂಡ ವಿಧಾನ ಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈ ಹಿಂದೆ ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ಸಿಗಲಿದೆ ಎನ್ನುವುದರ ಮೇಲೆ ಅವರ ತೀರ್ಮಾನ ಇರಲಿದೆ.

ಸಭಾಪತಿ ಬಸವರಾಜ ಹೊರಟ್ಟಿ ಸೇರಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ 40 ಸದಸ್ಯ ಬಲ ಹೊಂದಿದೆ. ಸುದೀರ್ಘ ಅವಧಿಯ ಬಳಿಕ ಈ ಸ್ಥಾನಗಳಿಂದ ಬಿಜೆಪಿ ವಿಧಾನ ಪರಿಷತ್‌ನ ಬಹುಮತ ಸಾಧಿಸಿದೆ. ಆದರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34ಕ್ಕೆ ಕುಸಿಯುವ ಸಾಧ್ಯತೆ ಹೆಚ್ಚಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...