ಶಿವಮೊಗ್ಗ | ಹೆಚ್ಚುತ್ತಿರುವ ಡೆಂಗ್ಯೂ; ನಗರಸಭೆ ನಿರ್ಲಕ್ಷ್ಯಕ್ಕೆ ಜನರ ಬೇಸರ

Date:

ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್ ಕಾಲೋನಿ, ಸಂತೆ ಮೈದಾನ, ಎನ್‌ಎಂಸಿ ಮುಖ್ಯ ರಸ್ತೆ, ಕನಕ ನಗರ, ಭೂತನ ಗುಡಿ ಹಾಗೂ ನಗರದ ಹೊರವಲಯದ ಬೆಳ್ಳಿಗೆರೆ ಹೀಗೆ, ಎಲ್ಲೇ ನೋಡಿದರು ಕಸದ ರಾಶಿ ಮತ್ತು ಚರಂಡಿಗಳು ಸ್ವಚ್ಛವಾಗಿಲ್ಲ.

ನಗರದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ ಸ್ವಚ್ಚವಾಗಿಲ್ಲ. ಆದರೂ ಜನರು ಅಲ್ಲಿನ ನೀರನ್ನು, ಕುಡಿಯುವುದಲ್ಲದೇ ಬಾಟಲ್‌ಗೆ ತುಂಬಿಸಿಕೊಳ್ಳುತ್ತಿದ್ದಾರೆ. ಕನಕ ನಗರದ ಭದ್ರಾನದಿ ಸೇತುವೆ ಮೇಲಿಂದ ಮಲಿನವಾದ ಕಸಗಳನ್ನು ಕೆಲವರು ನದಿಗೆ ಎಸೆಯುತ್ತಿದ್ದಾರೆ. ಇದು ಸೊಳ್ಳೆಗಳು ಹೆಚ್ಚಾಗಲು ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಮೇಲ್ನೋಟಕ್ಕೆ ನಗರದಲ್ಲಿ ಯಾವದೇ ಸ್ವಚ್ಛತೆ ಕಂಡುಬರುತ್ತಿಲ್ಲ. ಜಾಗೃತಿಯಬಗ್ಗೆ ಜನರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ. ಯಾವ ಆಶಾ ಕಾರ್ಯಕರ್ತರು ಬಂದು ಮಾಹಿತಿ ನೀಡಿಲ್ಲ ಮತ್ತು ಔಷಧಿ ಸಿಂಪಡಿಸುವ ಯಾವದೇ ಕ್ರಮ ತಗೊಂಡಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ತ್ವರಿತಗತಿಯಿಂದ ನಗರದಲ್ಲಿ ಸ್ವಚ್ಚತಾ ಕ್ರಮಗಳು ಮತ್ತು ಔಷಧಿ ಸಿಂಪಡಿಸಿ, ಜನರಿಗೆ ಮಾಹಿತಿ ನೀಡುವ ಕೆಲಸವಾಗಬೇಕಿದೆ. ಇಲ್ಲವಾದಲ್ಲಿ ಡೆಂಗ್ಯೂ ಮತ್ತು ಇತರ ಸಾಂಕ್ರಾಮಿಕ ಖಾಯಿಲೆಗಳು ಹೆಚ್ಚಾಗುವ ಎಲ್ಲಾ ಲಕ್ಷಣಗಳಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯರ ದೂರಿನಬಗ್ಗೆ ವಿಚಾರಿಸಲು ಈ ದಿನ.ಕಾಮ್ ನಗರಸಭೆ ಆಯುಕ್ತರನ್ನು ಸಂಪರ್ಕಿಸಲು ಯತ್ನಿಸಿತು,ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ.

ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿರುವ ಹಿರಿಯ ಆರೋಗ್ಯ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಡೆಂಗ್ಯೂ ಹರಡದಂತೆ ತಡೆಯಲು, ಆರೋಗ್ಯ ಇಲಾಖೆ ನಗರ ಸ್ವಚ್ಛತಾ ಕಸದ ವಾಹನಗಳಿಗೆ ಡೆಂಗ್ಯೂ ಅರಿವು ಮೂಡಿಸುವ ಹಾಡು ಹಾಕಲು ಸೂಚಿಸಿದ್ದೇವೆ. ಹಾಗೆ, ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತೆರಳಿ ಡೆಂಗ್ಯೂ ಬಗ್ಗೆ ಅರಿವು ಮೂಡಿಸಿ, ಎಚ್ಚರದಿಂದ ಇರಲು ಮತ್ತು ಸೊಳ್ಳೆ ಹರಡಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಮಾಹಿತಿ ನೀಡಲಾಗುತ್ತಿದೆ. ಕರಪತ್ರಗಳ ಮುಖಾಂತರ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಮಕ್ಕಳಲ್ಲಿ ಡೆಂಗ್ಯೂ ಮತ್ತು ಸಾಂಕ್ರಾಮಿಕ ಕಾಯಿಲೆ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...