ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ; ಸಚಿವ ಸಂಪುಟ ರಚನೆಗೆ ಸಿಎಂ-ಡಿಸಿಎಂ ಕಸರತ್ತು

Date:

ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಆದರೆ, ಮುಖ್ಯಮಂತ್ರಿ ಹುದ್ದೆ ಸಮಸ್ಯೆ ಬಗೆಹರಿಯುತ್ತಿದ್ದಂತೆಯೇ ಸಚಿವ ಸಂಪುಟದ ತಲೆನೋವು ಶುರುವಾಗಿದೆ. ಶುಕ್ರವಾರ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮತ್ತೆ ದೆಹಲಿಗೆ ತೆರಳಲಿದ್ದಾರೆ.

ಇಬ್ಬರೂ ನಾಯಕರು ತಮಗೆ ಪ್ರಬಲ ಖಾತೆಗಳು ಬೇಕು. ಜೊತೆಗೆ, ತಮ್ಮ ಆಪ್ತರಿಗೂ ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದಾರೆ. ರಾಜ್ಯದ 36 ಖಾತೆಗಳ ಪೈಕಿ ಸಿದ್ದರಾಮಯ್ಯ ಅವರು ಮೂರು ಖಾತೆ ಮತ್ತು ಡಿ.ಕೆ ಶಿವಕುಮಾರ್ ಎರಡು ಖಾತೆಗಳನ್ನು ತಮ್ಮಲ್ಲಿ ಇಟ್ಟುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಜೊತೆಗಿರುವ 10 ಶಾಸಕರು ಹಾಗೂ ಡಿ.ಕೆ ಶಿವಕುಮಾರ್‌ ಜೊತೆಗಿನ 10 ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು. ಉಳಿದ, ಸ್ಥಾನಗಳಿಗೆ ತಾವೇ ಶಾಸಕರನ್ನು ಆಯ್ಕೆ ಮಾಡುವುದಾಗಿ ಹೈಕಮಾಂಡ್‌ ಹೇಳಿದೆ ಎಂದು ತಿಳಿದುಬಂದಿದೆ. ಮೂರು ಖಾತೆಗಳನ್ನು ಖಾಲಿ ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ತಮಗೆ ಹಣಕಾಸು ಖಾತೆ ಬೇಕೆಂದು ಕೇಳಿದ್ದರು. ಆದರೆ, ಮುಖ್ಯಮಂತ್ರಿಯಾದ ತಮ್ಮ ಬಳಿಯೇ ಆ ಖಾತೆ ಇರಲಿ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ಹೀಗಾಗಿ, ಇಂಧನ, ಜಲ ಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಪೈಕಿ ಎರಡು ಖಾತೆಗಳನ್ನು ಪಡೆದುಕೊಳ್ಳಲು ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: 24ನೇ ಸಿಎಂ ಸಿದ್ದರಾಮಯ್ಯ | ರಾಜ್ಯ ಕಂಡ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರಪತಿ ಆಳ್ವಿಕೆಯ ಸಂಪೂರ್ಣ ವಿವರ

ಗೃಹ ಖಾತೆಯನ್ನು ಬಿ.ಕೆ ಹರಿಪ್ರಸಾದ್‌ ಅವರಿಗೆ ನೀಡುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ. ಶುಕ್ರವಾರ ಸಚಿವರ ಪಟ್ಟಿ ಅಂತಿಮವಾಗಲಿದ್ದು, ಶನಿವಾರ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಜೊತೆಗೆ ಡಿ.ಕೆ ಶಿವಕುಮಾರ್ ಹಾಗೂ 20 ಮಂದಿ ಸಚಿವರೂ ಕೂಡ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...