ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

Date:

  • ಬಿಜೆಪಿ ಸರ್ಕಾರ ಅಭಿವೃದ್ಧಿ ಎನ್ನುವ ಪದ ಮುಂದಿಟ್ಟು ಬೊಕ್ಕಸ ಲೂಟಿ ಮಾಡುತ್ತಿದೆ
  • ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶವನ್ನು ರಾಜ್ಯ ನೀಡಲಿದೆ

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಭಿವೃದ್ಧಿ ಎನ್ನುವ ಪದ ಮುಂದಿಟ್ಟುಕೊಂಡು ಬೊಕ್ಕಸವನ್ನು ಲೂಟಿ ಮಾಡುತ್ತಿದೆ. ಜನರು ಬದಲಾವಣೆ ಬಯಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶ ಕೊಡಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸೋಮವಾರ ಚಿಕ್ಕಮಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಈ ಚುನಾವಣೆ ಇಡೀ ದೇಶದಲ್ಲೇ ಮಹತ್ವ ಪಡೆದಿದೆ. ಕೇವಲ ರಾಜ್ಯದ ದೃಷ್ಟಿಯಿಂದ ಮಾತ್ರವಲ್ಲ. ದೇಶದ ದೃಷ್ಟಿಯಿಂದ ಒಳ್ಳೆಯ ಸಂದೇಶ ಕೊಡಲು ರಾಜ್ಯದ ಪ್ರಜ್ಞಾವಂತ ಜನರಿಗೆ ಅವಕಾಶ ಸಿಕ್ಕಿದೆ” ಎಂದರು.

ರಾಜ್ಯದ ಜನರಿಗೆ ನನ್ನ ಮನವಿ ಇಷ್ಟೇ: ಶಾಸಕರನ್ನೇ ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ. ಬಹುತೇಕ ಕಳ್ಳತನದ ಮೂಲಕವೇ ಬಿಜೆಪಿ ನಾನಾ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದೆ. ಹೀಗಾಗಿ ಕಳ್ಳರ ಹಾವಳಿ ಜಾಸ್ತಿ ಇದ್ದು, ಬಹುಮತಕ್ಕೆ ಬೇಕಾದ ಸಂಖ್ಯೆ ಕೊಟ್ಟರೂ ಈ ಬಿಜೆಪಿಗರು ಕಳ್ಳತನ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ನಾಲ್ಕೈದು ಸ್ಥಾನ ಹೆಚ್ಚು ಬಂದರೂ ಆ ಶಾಸಕರು ಬ್ಲ್ಯಾಕ್‌ ಮೇಲ್‌ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಯಾವುದೇ ಅಂತಂತ್ರವಾಗದಂತೆ ಕಾಂಗ್ರೆಸ್ಸಿಗೆ 140-150 ರವರೆಗೆ ಸ್ಥಾನಗಳನ್ನು ನೀಡುವ ಮೂಲಕ ಸುಭದ್ರ ಸರ್ಕಾರಕ್ಕೆ ಅವಕಾಶ ಮಾಡಿಕೊಡಿ” ಎಂದು ಖರ್ಗೆ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಪ್ರಗತಿಪರ ವಿಚಾರಧಾರೆ ಹೊಂದಿರುವ ರಾಜ್ಯ. ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಗಮನ ಸೆಳೆದಿದೆ. ಕೆಲವೇ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಳ್ಳೆ ಆಡಳಿತ ಕಂಡ ರಾಜ್ಯ. ಆದರೆ ಇಂದು ರಾಜ್ಯದ ಆಡಳಿತದಲ್ಲಿ ಸಾಕಷ್ಟು ವ್ಯತ್ಯಾಸ ಆಗಿದೆ. ಜನರ ಅಪೇಕ್ಷೆಯಂತೆ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಇಲ್ಲ. 40 ಪರ್ಸೆಂಟ್‌ ಕಮಿಷನ್‌ ಸರ್ಕಾರ ರಾಜ್ಯದಲ್ಲಿದೆ. ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿರಲಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-4: ಭ್ರಷ್ಟಾಚಾರವೇ ಚುನಾವಣೆಯ ಪ್ರಧಾನ ಸಂಗತಿ

“ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ಪ್ರಧಾನಿ ಮೋದಿ, ರಾಷ್ಟ್ರಪತಿ, ರಾಜ್ಯಪಾಲರಿಗೆ ಗುತ್ತಿಗೆದಾರರು ಪತ್ರ ಬರೆದರೂ ಅವರೆಲ್ಲರೂ ಕಿವುಡರಾಗಿ ನಡೆದುಕೊಂಡರು. ಕೆಲವು ಮಠಾಧೀಶರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದರು. ಇದೆಲ್ಲವೂ ನಾನು ಹೇಳುತ್ತಿಲ್ಲ. ಎಲ್ಲವೂ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹ ಸರ್ಕಾರ ಕಿತ್ತುಹಾಕಬೇಕು ಎಂಬುದು ಜನರ ಇಚ್ಛೆ. ಕಾಂಗ್ರೆಸ್‌ ಕೂಡ ಅಷ್ಟೇ ಹೋರಾಟ ಮಾಡಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರವು ರಾಜ್ಯದ ಭ್ರಷ್ಟಾಚಾರ ವಿಚಾರವಾಗಿ ಈವರೆಗೂ ತುಟಿ ಬಿಚ್ಚಿಲ್ಲ. ಈ ಸ‌ರ್ಕಾರಕ್ಕೆ ಕೋಮುವಾದಿ ಚಟುವಟಿಕೆಯಲ್ಲಿ ತೋರಿಸುವ ಆಸಕ್ತಿ ಅಭಿವೃದ್ಧಿ ವಿಚಾರಗಳಿಗೆ ಇಲ್ಲ. ಮೋದಿ ಮತ್ತು ಶಾಗೆ ರಾಜ್ಯದ ಭ್ರಷ್ಟಾಚಾರ ಗೊತ್ತಿದ್ದು ಮೌನವಾಗಿದ್ದಾರೆ. ಅವರಿಗೆ ಒಂದು ಮಾತು ಹೇಳಲು ಇಷ್ಟಪಡುವೆ; ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನೂ ಇಲ್ಲ. ಎಕ್ಸ್‌ಪ್ರೆಸ್‌ ರೋಡ್‌ ಉದ್ಘಾಟನೆ ಎಂಬುದು ಹಳೆ ರೋಡ್‌ ಉದ್ಘಾಟನೆ ಅಷ್ಟೇ” ಎಂದು ಟೀಕಿಸಿದರು

“ಚಿಕ್ಕಮಗಳೂರು ಪ್ರವಾಸೋದ್ಯಮ ಕೇಂದ್ರ ಆಗಬೇಕಿತ್ತು. ಎಲ್ಲಿ ಆಗಿದೆ? ಡಬಲ್‌ ಎಂಜಿನ್‌ ಸರ್ಕಾರ ಎಂಬುದು ಕೆಟ್ಟ ಎಂಜಿನ್‌ ಅದು. ನಾವು ನಾಲ್ಕು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮುಂದೆ ಹೋಗಿದ್ದೇವೆ. ಜನರು ನಮಗೆ ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆಯನ್ನು ರಾಜ್ಯದ ಜನ ತಾವೇ ಮುಂದೆ ಬಂದು ತೋರುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...