ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುವ ಬಿಜೆಪಿಯಿಂದಲೇ 40 ಮಂದಿಗೆ ಟಿಕೆಟ್: ಪ್ರಿಯಾಂಕ್ ಖರ್ಗೆ

Date:

  • ‘ಪ್ರಧಾನಿ ಮೋದಿ ₹1500 ಕೋಟಿ ಲೂಟಿ ಬಗ್ಗೆ ಮಾತನಾಡಲಿ’
  • 40% ಕಮಿಷನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆ ಎಂದ ಪ್ರಿಯಾಂಕ್‌

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ರಾಜಕೀಯ ರಣಕಣ ರಂಗೇರಿದೆ. ಸದಾ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಲು ಕುಟುಂಬ ರಾಜಕಾರಣ ನಡೆಸಿದ್ದಾರೆ ಎಂದು ಹೇಳುತ್ತಿತ್ತು. ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಉಲ್ಲೇಖಿಸಿ, “ದ್ವಂದ್ವ ಮತ್ತು ಸುಳ್ಳು ಬಿಜೆಪಿಯ ಸಹಜ ಸ್ವಭಾವ” ಎಂದು ವ್ಯಂಗ್ಯವಾಡಿದ್ದಾರೆ.

“ಕುಟುಂಬ ರಾಜಕಾರಣಕ್ಕೆ ಕೊನೆ ಹಾಡಿದ್ದೇವೆ ಎಂದು ಕೊಚ್ಚಿಕೊಳ್ಳುವ ಬಿಜೆಪಿ, ತನ್ನ ಪಟ್ಟಿಯಲ್ಲಿನ 212 ಅಭ್ಯರ್ಥಿಗಳ ಪೈಕಿ ಸುಮಾರು 40 ಮಂದಿ ರಾಜಕಾರಣಿಗಳ ಮನೆಯವರಿಗೇ ಟಿಕೆಟ್ ನೀಡಿದೆ” ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಮೀಸಲು ಕ್ಷೇತ್ರದಿಂದ ಟಿಕೆಟ್ ಕಳೆದುಕೊಂಡಿರುವ ಬಿಜೆಪಿ ಹಾಲಿ ಶಾಸಕ ನೆಹರೂ ಓಲೇಕಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ 1,500 ಕೋಟಿ ರೂ ಲೂಟಿ ಮಾಡಿರುವ ಆರೋಪ ಹೊರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಪ್ರಿಯಾಂಕ್ ಖರ್ಗೆ, “40% ಕಮಿಷನ್ ಏಜೆಂಟ್ ಬೊಮ್ಮಾಯಿ ಅವರಿಂದ ಬಿಜೆಪಿಗೆ ಹಿನ್ನಡೆಯಾಗಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ವಪಕ್ಷದ ವಿರುದ್ಧ ನೆಹರೂ ಓಲೇಕಾರ್‌ ತಮ್ಮ ಕ್ಷೇತ್ರದಲ್ಲಿ ತುಂತುರು ನೀರಾವರಿ ಯೋಜನೆಯಲ್ಲಿ ₹1500 ಕೋಟಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ದಯವಿಟ್ಟು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತಿಳಿಸಿ, ಮುಂದಿನ ಬಾರಿ ಅವರು ರಾಜ್ಯಕ್ಕೆ ಬಂದಾಗ ಇದರ ಬಗ್ಗೆ ಮಾತನಾಡಲು” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...