ತುಮಕೂರು | ಕಾಂಗ್ರೆಸ್‌-ಬಿಜೆಪಿ ಮುಖಂಡರಿಂದ ಎಚ್‌ಡಿಕೆ ಭೇಟಿ; ಪಕ್ಷ ಸೇರ್ಪಡೆಗೆ ಮಾತುಕತೆ

Date:

  • ಟಿಕೆಟ್‌ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ
  • ಷರತ್ತುಗಳಿಲ್ಲದೆ ಜೆಡಿಎಸ್‌ ಸೇರ್ಪಡೆಯಾಗುವ ಬಗ್ಗೆ ಮಾತುಕತೆ

ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ ಬೆಂಗಳೂರಿನಲ್ಲಿ ಜೆಡಿಎಸ್‍ನ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಗುಬ್ಬಿ ಕ್ಷೇತ್ರದಲ್ಲಿದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಅನ್ನು ಕಟ್ಟಿ ಬೆಳೆಸುವಲ್ಲಿ ಬೆಟ್ಟಸ್ವಾಮಿ ಮತ್ತು ಹೊನ್ನಗಿರಿಗೌಡ ಪ್ರಮುಖ ಪಾತ್ರವಹಿಸಿದ್ದಾರೆ. ಈ ಇಬ್ಬರೂ ಈ ಬಾರಿ ತಮ್ಮ ಪಕ್ಷಗಳಿಂದ ಟಿಕೆಟ್ ಅಕಾಂಕ್ಷಿಗಾಳಗಿದ್ದರು. ಆದರೆ, ಈ ಇಬ್ಬರಿಗೂ ಉಭಯ ಪಕ್ಷಗಳು ಟಿಕೆಟ್‌ ನೀಡಲು ನಿರಾಕರಿಸಿವೆ.

ಅಲ್ಲದೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲವೆಂದು ಆರೋಪಿಸಿರುವ ಇಬ್ಬರೂ, ಯಾವುದೇ ಷರತ್ತುಗಳಿಲ್ಲದೆ ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಡೂರು ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ ದತ್ತಗೆ ಎದುರಾದ ಬಂಧನ ಭೀತಿ

ಗುಬ್ಬಿಯಲ್ಲಿ ನಡೆಯುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಬೆಟ್ಟಸ್ವಾಮಿ ಮತ್ತು ಹೊನ್ನಗಿರಿಗೌಡ ಅವರನ್ನು ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಇವರ ಜೊತೆಗೆ ಗುಬ್ಬಿ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ನರಸಿಂಹಯ್ಯ ಸಹ ಜೆಡಿಎಸ್‌ ಸೇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...