ನಮ್ಮ ದೇಣಿಗೆ ಹಣದಲ್ಲೇ ಠೇವಣಿ ಇಡಿ : ಕಾರ್ಯಕರ್ತರ ಒತ್ತಾಯ, ಭಾವುಕರಾದ ಪರಮೇಶ್ವರ್‌

Date:

ಡಾ ಜಿ ಪರಮೇಶ್ವರ್ ಅವರು ನಾಮಪತ್ರ ಸಲ್ಲಿಸುವ ವೇಳೆ ನಮ್ಮ ದುಡ್ಡನ್ನೇ ಠೇವಣಿ ಇಡಬೇಕೆಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಒಂದಿಲ್ಲೊಂದು ಕುತೂಹಲಕಾರಿ ವಿದ್ಯಮಾನಗಳು ಜರುಗುತ್ತಿವೆ. ಇದೀಗ ಕಾರ್ಯಕರ್ತರೇ ದೇಣಿಗೆ ನೀಡಿರುವ ಘಟನೆ ನಡೆದಿದೆ.

ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಿಗೆ ಪಕ್ಷದ ಕಾರ್ಯಕರ್ತರು ಹಣ ನೀಡಿ ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಸಚಿವರ ಸಂಪತ್ತು ಹಲವು ಪಟ್ಟು ಹೆಚ್ಚಳ

ಕೊರಟಗೆರೆಯ ಗ್ರಾಮವೊಂದರಲ್ಲಿ ಸಭೆ ನಡೆದ ಬಳಿಕ 100ಕ್ಕೂ ಹೆಚ್ಚು ಕಾರ್ಯಕರ್ತರು ಠೇವಣಿ ಹಣವನ್ನು ತಾವು ನೀಡಿದ ದೇಣಿಗೆಯಿಂದಲೇ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾರ್ಯಕರ್ತರ ಸಭೆ ಬಳಿಕ ನೂರಾರು ಕಾರ್ಯಕರ್ತರು ದೇಣಿಗೆ ಹಣ ನೀಡಿದ್ದಾರೆ. ಈ ಮೂಲಕ ಪರಮೇಶ್ವರ್ ಅವರಿಗೆ ಶಕ್ತಿ ತುಂಬಲು ಮುಂದಾಗಿದ್ದಾರೆ.

ಕಾರ್ಯಕರ್ತರು ದೇಣಿಗೆ ನೀಡಿ, ಅದೇ ಹಣದಿಂದ ಠೇವಣಿ ಇರಿಸುವಂತೆ ಹೇಳಿದ್ದು, ಜನರ ಪ್ರೀತಿಗೆ ಜಿ ಪರಮೇಶ್ವರ್ ಭಾವುಕರಾಗಿದ್ದಾರೆ.

ಈ ಮೊದಲು ವೈ ಎಸ್ ವಿ ದತ್ತ ದೇಣಿಗೆ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ವಿಧಾನಪರಿಷತ್ ಸದಸ್ಯ ವೈಎಸ್ ವಿ ದತ್ತ ಅವರಿಗೆ ಕಡೂರಿನ ‘ಕೈ’ ಟಿಕೆಟ್ ತಪ್ಪಿತ್ತು. ಬಳಿಕ ಬೇಸರಗೊಂಡಿದ್ದ ಅವರು ಕಾರ್ಯಕರ್ತರ ಸಭೆ ಕರೆದಿದ್ದರು. ಕಾರ್ಯಕರ್ತರ ಸಭೆ ಬಳಿಕ ವೈ ಎಸ್‌ ವಿ ದತ್ತ ಅವರು ದೇಣಿಗೆ ಸಂಗ್ರಹಿಸಿ ಗಮನ ಸೆಳೆದಿದ್ದರು. ಬಳಿಕ ಕಾಂಗ್ರೆಸ್ ತೊರೆದು ಮರಳಿ ಜೆಡಿಎಸ್‌ಗೆ ಸೇರ್ಪಡೆಯಾಗಿ ಟಿಕೆಟ್ ಗಿಟ್ಟಿಸಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...