ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸುವಂತೆ ಕೇರಳ ಸಿಎಂಗೆ ಮನವಿ

Date:

ಕಳೆದ ತಿಂಗಳು ಮಂಗಳೂರಿನಲ್ಲಿ ಸಂಘ ಪರಿವಾರದ ಕಾರ್ಯಕರ್ತರಿಂದ ಗುಂಪು ಹತ್ಯೆಯಾದ ಕೇರಳ ರಾಜ್ಯದ ವಯನಾಡ್‌ ಜಿಲ್ಲಾ ನಿವಾಸಿ ಮುಹಮ್ಮದ್‌ ಅಶ್ರಫ್‌ ಕುಟುಂಬಕ್ಕೆ ನ್ಯಾಯ ಒದಗಿಸಲು ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿ ಸಿಪಿಐಎಂ ವಯನಾಡ್‌ ಜಿಲ್ಲಾ ಕಮಿಟಿ ಮತ್ತು ಜಸ್ಟಿಸ್ ಫಾರ್ ಅಶ್ರಫ್ ಯಾಕ್ಷನ್ ಕಮಿಟಿಯ ನಿಯೋಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ವಯನಾಡ್‌ ಜಿಲ್ಲಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರನ್ನು ಮೇ 21ರಂದು ಭೇಟಿ ಮಾಡಿದ ಸಿಪಿಐಎಂ ವಯನಾಡ್‌ ಜಿಲ್ಲಾ ಸಮಿತಿ ಮತ್ತು ಜಸ್ಟಿಸ್ ಫಾರ್ ಅಶ್ರಫ್ ಯಾಕ್ಷನ್ ಕಮಿಟಿಯ ನಿಯೋಗ, ಅಶ್ರಫ್‌ ಗುಂಪು ಹತ್ಯೆಯನ್ನು ಉನ್ನತ ಮಟ್ಟದ ತನಿಖೆ ನಡೆಸಿ ಅಶ್ರಫ್‌ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಕರ್ನಾಟಕ ಸರಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿ ಅಶ್ರಫ್‌ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸುವಂತೆ ಒತ್ತಾಯಿಸುವಂತೆ ನಿಯೋಗ ಆಗ್ರಹಿಸಿದೆ. ನಿಯೋಗದ ಮನವಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಕಾರಾತ್ಮಕ ಸ್ಪಂದನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ‘ಸಂಸದರ ಈಜು ಕೊಳ’ ಸಮಸ್ಯೆಗೆ ಕೊನೆಗೂ ಪರಿಹಾರ

ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗದಲ್ಲಿ ಮಾಜಿ ಸಚಿವ, ಹಿರಿಯ ಕಮ್ಯುನಿಸ್ಟ್ ನೇತಾರ ಪಾಲೋಳಿ ಮುಹಮ್ಮದ್ ಕುಟ್ಟಿ, ಸಿಪಿಐಎಂ ವಯನಾಡ್ ಜಿಲ್ಲಾ ನಾಯಕರಾದ ಅಹ್ಮದ್ ಮಟ್ಟಿ, ಅಡ್ವಕೇಟ್ ಜಯಕೃಷ್ಣನ್, ಯಾಕ್ಷನ್ ಕಮಿಟಿಯ ನಝರ್ ಪರಪ್ಪೂರ್, ನಾಸರ್ ಕಪ್ಪನ್, ರಹೀಮ್ ಕೆ ಕೆ, ಅಬ್ದುಲ್ ಹಖ್ ಉಪಸ್ಥಿತರಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...