ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್

Date:

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ” ಎಂದರು.

“ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ” ಎಂದು‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರಿಗೆ ತೆರಳಲು ನನಗೆ ಸಿಎಂ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ: ಬಿ ಕೆ ಹರಿಪ್ರಸಾದ್‌

“ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ. ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ” ಎಂದರು.

“ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...