ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

Date:

ಉತ್ತರ ಕನ್ನಡ ಜಿಲ್ಲೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪುಟದಿಂದ ರಾಜಣ್ಣ ವಜಾ- ಕಾಂಗ್ರೆಸ್ಸಿಗರಿಗೆ ಪಾಠವಾಗುವುದೇ?

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡದ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...