ದಲಿತರನ್ನು ಬೇರೆಡೆ ಕಳಿಸಿ ಎಂದ ಗ್ರಾಮಸ್ಥ; ಕೇಸ್‌ ಬೀಳ್ತವೆ ಹುಷಾರ್ ಎಂದ ಪಕ್ಷೇತರ ಅಭ್ಯರ್ಥಿ

Date:

ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್‌ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಕುಪ್ಪಳಿ ಗ್ರಾಮದಲ್ಲಿ ನಡೆದಿದೆ.

ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಚಂದನ್‌ಗೌಡ ಪ್ರಚಾರಕ್ಕೆಂದು ಕುಪ್ಪಳ್ಳಿಗೆ ತೆರಳಿದ್ದರು. ಗ್ರಾಮಸ್ಥರೊಂದಿಗೆ ಮಾತನಾಡುವ ವೇಳೆ, ಮೈಕ್‌ ಪಡೆದುಕೊಂಡ ವ್ಯಕ್ತಿಯೊಬ್ಬ, “ದಲಿತರನ್ನು ಊರಿಂದ ಬೇರೆ ಜಾಗಕ್ಕೆ ಕಳಿಸಿಕೊಡಿ ಸಾಕು. ಅವರು ನಮ್ಮ ಮನೆಗಳ ಸುತ್ತಲೂ ಇದ್ದು, ನಾವು ಮಧ್ಯದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಯಾಕಪ್ಪ ಅವರನ್ನು ಬೇರೆ ಕಳಿಸಬೇಕು ಎಂದು ಚಂದನ್‌ ಗೌಡ ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ವ್ಯಕ್ತಿ, “ನಮಗೆ ದನ-ಕರ ಕಟ್ಟಿಕೊಳ್ಳೇಕೆ ತೊಂದರೆ ಆಗ್ತಾ ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆ ಹೇಳಿದ ವ್ಯಕ್ತಿಗೆ ಬುದ್ದಿ ಹೇಳಿದ ಚಂದನ್ ಗೌಡ, “ಸಾಮಾಜಿಕವಾಗಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಅದನ್ನ ಕಸಿದುಕೊಳ್ಳೋಕೆ ಆಗಲ್ಲ. ಯಾರನ್ನು ಎಲ್ಲಿಂದಲೂ ಕಳಿಸೋಕೆ ಯಾರಿಗೂ ಹಕ್ಕಿಲ್ಲ. ಹೀಗೆಲ್ಲ ಮಾತಾಡಿದ್ರೆ ಕೇಸ್‌ ಬೀಳ್ತವೆ” ಎಂದು ಎಚ್ಚರಿಸಿದ್ದಾರೆ.

“ನಿಮಗೆ ಅವರನ್ನ ಬೇರೆಡೆ ಕಳಿಸಲೇಬೇಕೆಂದಿದ್ದರೆ, ನನ್ನಿಂದ ಆಗಲ್ಲ. ನನಗೆ ನೀವ್ಯಾರೂ ಮತ ಹಾಕಬೇಡಿ. ಓಟು ಕೇಳೋಕೆ ಬರುವ ಎಂಪಿ ಅಥವಾ ಶಾಸಕನ ಬಳಿ ಕೇಳಿ, ಸ್ಥಳಾಂತರ ಮಾಡಿಸಿಕೊಳ್ಳಿ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...