115 ಸ್ಥಾನ ಪಡೆದು ಸರ್ಕಾರ ರಚಿಸುತ್ತೇವೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

Date:

“ರಾಜ್ಯದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನೇ ಹೇಳಲಿ, ನಾವು 115 ಸ್ಥಾನ ಪಡೆದು, ಬಿಜೆಪಿ ಸರ್ಕಾರ ರಚಿಸುತ್ತೇವೆ” ಎಂದು ಮಾಜಿ‌ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿಕಾರಿಪುರದಲ್ಲಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮತದಾನದ ನಂತರ ರಾಜ್ಯದ ಉದ್ದಗಲಕ್ಕೂ ನಮ್ಮ ಎಲ್ಲ ಮುಖಂಡರೊಂದಿಗೆ ಮಾತನಾಡಿದ್ದೇನೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಆ ಆಧಾರದ ಮೇಲೆ ಹೇಳುವೆ; ನಾವು ಸರ್ಕಾರ ರಚಿಸುತ್ತೇವೆ” ಎಂದರು.

“ನಾನು ಪ್ರಚಾರಕ್ಕೆ ಹೋದಂತಹ ವೇಳೆ ಜನ ಬೆಂಬಲ ಸಿಕ್ಕಿದೆ. ಎಸ್‌ಸಿ, ಎಸ್‌ಟಿಗೆ ಕೊಟ್ಟಂತಹ ಮೀಸಲಾತಿ ಗಮನಿಸಿದಾಗ ಈ ಸಮೀಕ್ಷೆಗಳು ಸುಳ್ಳಾಗಲಿವೆ. ನಿಶ್ಚಿತವಾಗಿ 115ಕ್ಕೂ ಹೆಚ್ಚು ಸ್ಥಾನ ಪಡೆದು ಸ್ವಂತ ಶಕ್ತಿ ಮೇಲೆ ಸರ್ಕಾರ ರಚನೆ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಏನೇ ಹೇಳಲಿ ಅದಕ್ಕೆ ನಾನು ಟೀಕೆ ಮಾಡುವುದಿಲ್ಲ. ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಕೊಟ್ಟಿರುವುದು ನಿಜ. ಒಂದೆರೆಡು ಸಮೀಕ್ಷೆಗಳು ನಮ್ಮ ಪರವಾಗಿಯೂ ಇವೆ. ಮತ ಎಣಿಕೆ ನಂತರ ಸಂಜೆ ಅಥವಾ ಮರುದಿನ ಬೆಳಗ್ಗೆ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚಿಸುತ್ತೇವೆ” ಎಂದು ತಿಳಿಸಿದರು.

“ನಮ್ಮನ್ನು ಬಿಟ್ಟು ಸರ್ಕಾರ ಮಾಡಲು ಆಗುವುದಿಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೆಚ್‌ಡಿಕೆ ಹಾಗೆ ಹೇಳುವುದರಲ್ಲಿ ತಪ್ಪು ಏನಿಲ್ಲ. ನೋಡೋಣ, ಫಲಿತಾಂಶ ಬಂದ ನಂತರ ತೀರ್ಮಾನ ಮಾಡೋಣ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...