ಚುನಾವಣೆ 2023 | ಶೆಟ್ಟರ್ ಕ್ಷೇತ್ರದಲ್ಲಿ ಪಕ್ಷ ಬಲಪಡಿಸುತ್ತೇವೆ: ಪ್ರಲ್ಹಾದ್ ಜೋಶಿ

Date:

  • ಶೆಟ್ಟರ್ ಉಳಿಸಿಕೊಳ್ಳಲು ಪ್ರಯತ್ನಿಸಿದೆ, ಆದರೆ ನನ್ನ ಮಾತು ಅವರು ಕೇಳಲಿಲ್ಲ
  • ಶೆಟ್ಟರ್ ಹೋದರೂ ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ

ಶೆಟ್ಟರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಪ್ರಯತ್ನಿಸಿದೆ. ಆದರೂ ಅವರು ಬಿಜೆಪಿ ಬಿಟ್ಟು ಹೋದರು. ನಾವು ಇಲ್ಲಿ ಪಕ್ಷ ಬಲಪಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಶೆಟ್ಟರ್ ಇಲ್ಲದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷಕ್ಕಾಗುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಅಖಾಡಕ್ಕಿಳಿದಿರುವ ಜೋಶಿ, ಮಂಗಳವಾರ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿ ಮಾತನಾಡಿದರು.‌

“ಶೆಟ್ಟರ್ ಬಿಜೆಪಿ ಬಿಟ್ಟು ಹೋಗಬಾರದಿತ್ತು. ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ನಾನು ಹೈಕಮಾಂಡ್ ಜೊತೆ ಮಾತನಾಡ್ತೇನೆ ಎಂದು ಶೆಟ್ಟರ್ ಗೆ ಮನವಿ ಮಾಡಿದ್ದೆ. ಆದರೆ ಶೆಟ್ಟರ್ ನನ್ನ ಮಾತು ಕೇಳಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೆಟ್ಟರ್ ಹೋದರೂ ಹುಬ್ಬಳ್ಳಿ ಧಾರವಾಡದಲ್ಲಿ ಪಕ್ಷದ ಜೊತೆ ಕಾರ್ಯಕರ್ತರಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ನಾವು ಪಕ್ಷ ಕಟ್ಟುವ ಕಾರ್ಯದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುತ್ತೇವೆ” ಎಂದು ಜೋಶಿ ತಿಳಿಸಿದರು.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಹುಬ್ಬಳ್ಳಿ ಧಾರವಾಡ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಅರವಿಂದ ಬೆಲ್ಲದ್ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ್ ದೇಸಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದ ಜೋಶಿ ಬಿಜೆಪಿ ಅಭ್ಯರ್ಥಿಗಳಿಗೆ ನೈತಿಕ ಸ್ಥೈರ್ಯ ತುಂಬಿದರು. ಹುಬ್ಬಳ್ಳಿ ಧಾರವಾಡದಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಚಿಕ್ಕೋಡಿಗೆ ತೆರಳಿದ ಜೋಶಿ, ನಿಖಿಲ್ ಕತ್ತಿ ಅವರ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...